Breaking News

ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟ, ಕೊರೋನಾ 2 ನೇ ಅಲೆ ಆರ್ಭಟ ತಡೆಗೆ ಹಬ್ಬ ಆಚರಣೆಗೆ ನಿರ್ಬಂಧ

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ಆರ್ಭಟದ ಹಿನ್ನೆಲೆಯಲ್ಲಿ ಮುಂದಿನ ಹಬ್ಬ-ಹರಿದಿನ ಆಚರಣೆಗೆ ಮಾರ್ಗಸೂಚಿ ಪ್ರಕಟಿಸಲಾಗಿದೆ.

ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಆಚರಣೆ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ಯುಗಾದಿ ಹಬ್ಬ, ಹೋಳಿ ಹಬ್ಬ, ಗುಡ್ ಫ್ರೈಡೇ, ಶಬ್ ಎ ಬರಾತ್ ಮೊದಲಾದ ಹಬ್ಬಗಳಂದು ಸಾರ್ವಜನಿಕ ಸ್ಥಳಗಳಲ್ಲಿ ಆಚರಣೆ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.

ಸಾರ್ವಜನಿಕ ಸ್ಥಳಗಳು, ಮೈದಾನ, ಮಾರ್ಕೆಟ್, ಪಾರ್ಕ್, ಪ್ರಾರ್ಥನಾ ಮಂದಿರಗಳಲ್ಲಿ ಆಚರಿಸುವುದಕ್ಕೆ ನಿಷೇಧ ಹೇರಲಾಗಿದೆ. ಆದೇಶ ಉಲ್ಲಂಘಿಸಿದರೆ NDMA ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರದಿಂದ ಎಚ್ಚರಿಕೆ ನೀಡಲಾಗಿದೆ.

ರಾಜ್ಯದಲ್ಲಿ ಕೊರೋನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಹಬ್ಬ-ಹರಿದಿನಗಳ ಆಚರಣೆಗೆ ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ