Breaking News

ಕರ್ನಾಟಕದ ದಶಕಗಳ ಬೇಡಿಕೆಗೆ ಒಪ್ಪಿದ ಕೇಂದ್ರ ಸರ್ಕಾರ

Spread the love

ಬೆಂಗಳೂರು, ಮಾರ್ಚ್ 26; ಕರ್ನಾಟಕ ರಾಜ್ಯದ ದಶಕಗಳ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಯೋಜನೆ ಸ್ಥಾನಮಾನವನ್ನು ನೀಡಲು ಅನುಮೋದನೆ ಸಿಕ್ಕಿದೆ.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಟ್ವೀಟ್ ಮೂಲಕ ಈ ಕುರಿತು ಮಾಹಿತಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಗೆ ಅಭಿನಂದನೆ ಸಲ್ಲಿಸಿದ್ದಾರೆ. ರಾಷ್ಟ್ರೀಯ ಯೋಜನೆ ಸ್ಥಾನಮಾನ ಪಡೆದ ರಾಜ್ಯದ ಮೊದಲ ಯೋಜನೆ ಇದಾಗಿದೆ.

 

ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳ ರೈತರಿಗೆ ಅನುಕೂಲವಾಗುವ ಈ ಯೋಜನೆಗೆ 21,450 ಕೋಟಿ ರೂ. ವೆಚ್ಚವಾಲಿದೆ ಎಂದು ಅಂದಾಜಿಸಲಾಗಿದೆ. ರಾಷ್ಟ್ರೀಯ ಯೋಜನೆಯಾದ ಕಾರಣ ಕೇಂದ್ರದಿಂದ 16,125 ಕೋಟಿ ಅನುದಾನ ಸಿಗಲಿದೆ.

 

ಕೇಂದ್ರ ಹೂಡಿಕೆ ಸಮಿತಿಯು ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ. ಜಲಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಅವರ ಶ್ರಮವೂ ಇದರಲ್ಲಿ ಸಾಕಷ್ಟು ಇದೆ. ಹಲವು ಬಾರಿ ದೆಹಲಿಗೆ ತೆರಳಿ ಅಧಿಕಾರಿಗಳ ಜೊತೆ ಯೋಜನೆ ಬಗ್ಗೆ ಚರ್ಚೆ ನಡೆಸಿದ್ದರು.

 

ಭದ್ರಾ ಮೇಲ್ದಂಡೆ ಯೋಜನೆಯಿಂದ ಚಿತ್ರದುರ್ಗ, ದಾವಣಗೆರೆ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಯ 2.25 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸಲಾಗುತ್ತದೆ. ರಾಷ್ಟ್ರೀಯ ಯೋಜನೆ ಸ್ಥಾನಮಾನ ಪಡೆಯಬೇಕಾದರೆ ಹನಿ ನೀರಾವರಿ ಯೋಜನೆ ಅಡಿಯಲ್ಲಿ 2 ಲಕ್ಷ ಹೆಕ್ಟೇರ್ ಪ್ರದೇಶವನ್ನು ಒಳಗೊಂಡಿರಬೇಕು.

2003ರಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಒಪ್ಪಿಗೆ ಪಡೆಯಲಾಯಿತು. ಅರಣ್ಯ ಇಲಾಖೆ ಅನುಮಿತಿ, ಭೂ ಸ್ವಾಧೀನ, ಹೆಚ್ಚಿದ ವೆಚ್ಚ ಸೇರಿದಂತೆ ವಿವಿಧ ಕಾರಣದಿಂದಾಗಿ ಯೋಜನೆ ವಿಳಂಬವಾಯಿತು. ಪ್ರಸ್ತುತ ಶೇ 16ರಷ್ಟು ಯೋಜನೆ ಕಾಮಗಾರಿ ಪೂರ್ಣಗೊಂಡಿದೆ.

ಏನಿದು ಯೋಜನೆ? ತುಂಗಾ ಜಲಾಶಯದ ನೀರನ್ನು ಲಕ್ಕವಳ್ಳಿ ಸಮೀಪದ ಭದ್ರಾ ಜಲಾಶಯಕ್ಕೆ ಹರಿಸಲಾಗುತ್ತದೆ. ಅಲ್ಲಿಂದ ನಾಲೆ ಮೂಲಕ ಚಿತ್ರದುರ್ಗ, ತುಮಕೂರು, ದಾವಣಗೆರೆ ಜಿಲ್ಲೆಗಳಿಗೆ ಹರಿಸಲಾಗುತ್ತದೆ.

ಮುಖ್ಯಮಂತ್ರಿಯಾಗಿದ್ದ ಎಸ್. ನಿಜಲಿಂಗಪ್ಪ ಅವರ ಕಾಲದಲ್ಲಿಯೇ ಭದ್ರಾ ನೀರನ್ನು ಚಿತ್ರದುರ್ಗಕ್ಕೆ ಹರಿಸಬೇಕು ಎಂದು ಪ್ರಯತ್ನ ನಡೆದಿತ್ತು. ನೀರಾವರಿ ತಜ್ಞ ಕೆ. ಸಿ. ರೆಡ್ಡಿ ಅಧ್ಯಕ್ಷತೆಯಲ್ಲಿ ರಚನೆಗೊಂಡ ಸಮಿತಿ ಅಧ್ಯಯನ ನಡೆಸಿ ಸರ್ಕಾರಕ್ಕೆ ಯೋಜನೆ ಬಗ್ಗೆ ವರದಿ ನೀಡಿತ್ತು. 2008ರಲ್ಲಿ ಸರ್ಕಾರ ಯೋಜನೆಗೆ ಚಾಲನೆ ನೀಡಿತು.


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ