Breaking News

ಸವದತ್ತಿ ಯಲ್ಲಮ್ಮ ದೇವಸ್ಥಾನದ ಹುಂಡಿಯಲ್ಲಿ 20 ದಿನದಲ್ಲಿ 53.80 ಲಕ್ಷ ರೂ. ಕಾಣಿಕೆಸಂಗ್ರಹ

Spread the love

ಸವದತ್ತಿ – ಕೇವಲ 20 ದಿನದಲ್ಲಿ ಸವದತ್ತಿ ಯಲ್ಲಮ್ಮ ದೇವಸ್ಥಾನದ ಹುಂಡಿಯಲ್ಲಿ 53.80 ಲಕ್ಷ ರೂ.ಕಾಣಿಕೆ ಸಂಗ್ರಹವಾಗಿದೆ.

ಕೊರೋನಾ ಹಿನ್ನೆಲೆಯಲ್ಲಿ ಸಾಲಿನಲ್ಲಿ ಕೇವಲ 20 ದಿನ ದೇವಸ್ಥಾನದ ಬಾಗಿಲು ತೆರೆಯಲಾಗಿತ್ತು. ಈ ಅಲ್ಪ ಅವಧಿಯಲ್ಲಿ ಇಷ್ಟು ದೊಡ್ಡ ಮೊತ್ತದ ಕಾಣಿಕೆ ಬಂದಿದೆ. 85 ಜನರು ಸೇರಿ ಕಾಣಿಕೆಯನ್ನು ಎಣಿಸಿದ್ದಾರೆ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೊಟಾರಗಸ್ತಿ ತಿಳಿಸಿದ್ದಾರೆ.

ಕಳೆದ ಮಾರ್ಚ್ ತಿಂಗಳಲ್ಲಿ ಕೊರೋನಾ ಆರಂಭವಾದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿರ್ಬಂದಿಸಲಾಗಿತ್ತು. ಜನೆವರಿ ಅಂತ್ಯದವರೆಗೂ ನಿರ್ಬಂದ ಮುಂದುವರಿದಿತ್ತು. ಫೆಬ್ರವರಿ 1ರಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಯಿತು. ಆದರೆ ಮತ್ತೆ ಮಹಾರ್ಷ್ಟ್ರದಲ್ಲಿ ಕೊರೋನಾ ಜೋರಾದ ಹಿನ್ನೆಲೆಯಲ್ಲಿ ಫೆ.20ರಿಂದ ದರ್ಶನ ನಿಲ್ಲಿಸಲಾಯಿತು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ