Home / ರಾಜ್ಯ / ಎಲೆಕ್ಟೊರಲ್ ಬಾಂಡ್​ಗಳ ವಿರುದ್ಧ ತಡೆಯಾಜ್ಞೆ ಇಲ್ಲ : ಸುಪ್ರೀಂ ಕೋರ್ಟ್

ಎಲೆಕ್ಟೊರಲ್ ಬಾಂಡ್​ಗಳ ವಿರುದ್ಧ ತಡೆಯಾಜ್ಞೆ ಇಲ್ಲ : ಸುಪ್ರೀಂ ಕೋರ್ಟ್

Spread the love

ನವದೆಹಲಿ : ಕಳೆದ ಮೂರು ವರ್ಷಗಳಂತೆ ಈ ಬಾರಿಯೂ ಏಪ್ರಿಲ್​ನಲ್ಲಿ ಎಲೆಕ್ಟೊರಲ್ ಬಾಂಡ್​ಗಳ ಖರೀದಿಗೆ ಅವಕಾಶ ಲಭಿಸಲಿದೆ. ಏಕೆಂದರೆ ದೇಶದ ಕೆಲವೆಡೆ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಬಾಂಡ್‌ಗಳ ಮಾರಾಟವನ್ನು ತಡೆಹಿಡಿಯಲು ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ತಿರಸ್ಕರಿಸಿದೆ.

ರಾಜಕೀಯ ಪಕ್ಷಗಳು ಹಣ ಸಂಗ್ರಹಿಸಲು ಅನುಕೂಲವಾಗುವಂತೆ ನರೇಂದ್ರ ಮೋದಿ ಸರ್ಕಾರವು ಜನವರಿ 2018 ರಲ್ಲಿ ಎಲೆಕ್ಟೊರಲ್ ಬಾಂಡ್​ ಸ್ಕೀಮ್​ಅನ್ನು ಜಾರಿಗೊಳಿಸಿತ್ತು. ವ್ಯಕ್ತಿಗಳು ಅಥವಾ ಕಂಪೆನಿಗಳು ಈ ಮೂಲಕ 1000 ರೂಪಾಯಿಂದ ಹಿಡಿದ 1 ಕೋಟಿ ರೂಪಾಯಿವರೆಗೆ ಎಸ್​ಬಿಐನಿಂದ ಬಾಂಡ್ ಖರೀದಿಸಿ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಬಹುದಾಗಿದೆ.

ಈ ಯೋಜನೆಯ ವಿರುದ್ಧ ಸಿಪಿಐ-ಎಂ ಪಕ್ಷದೊಂದಿಗೆ ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್(ಎಡಿಆರ್) ಮತ್ತು ಕಾಮನ್ ಕಾಸ್ ಎಂಬ ಸರಕಾರೇತರ ಸಂಸ್ಥೆಗಳು ಪಿಐಎಲ್ ಸಲ್ಲಿಸಿವೆ. ಸುಪ್ರೀಂ ಕೋರ್ಟ್ ಮುಂದೆ ಈ ಬಾಂಡ್​ಗಳ ಕಾನೂನುಬದ್ಧತೆಯ ಬಗ್ಗೆ ವಿಚಾರಣೆ ನಡೆಯುತ್ತಿದೆ.
ಇದೀಗ ನಾಲ್ಕು ರಾಜ್ಯಗಳಲ್ಲಿ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿರುವುದರಿಂದ ಈ ವರ್ಷ ಏಪ್ರಿಲ್​ನಲ್ಲಿ ಎಲೆಕ್ಟೊರಲ್ ಬಾಂಡ್​ಗಳನ್ನು ಹೊಸದಾಗಿ ಮಾರಾಟ ಮಾಡದಂತೆ ತಡೆಯಾಜ್ಞೆ ನೀಡಬೇಕೆಂದು ಎಡಿಆರ್ ಸಂಸ್ಥೆ ಅರ್ಜಿ ಸಲ್ಲಿಸಿತ್ತು.

ಈ ಅರ್ಜಿಯ ವಿಚಾರಣೆ ನಡೆಸಿ ತೀರ್ಪು ನೀಡಿದ ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ಅವರ ನೇತೃತ್ವದ ನ್ಯಾಯಪೀಠವು ಬಾಂಡ್​ಗಳ ಮಾರಾಟಕ್ಕೆ ಸಾಕಷ್ಟು ಸುರಕ್ಷತಾ ಕ್ರಮಗಳು ಚಾಲ್ತಿಯಲ್ಲಿವೆ ಎಂದು ಅಭಿಪ್ರಾಯಪಟ್ಟಿದೆ. ಅರ್ಜಿಯನ್ನು ತಿರಸ್ಕರಿಸಿರುವ ಕೋರ್ಟ್, ‘ಈ ಬಾಂಡ್​ಗಳನ್ನು ಕಾಲಕಾಲಕ್ಕೆ ಬಿಡುಗಡೆ ಮಾಡಲಾಗುತ್ತಿದೆ. 2018, 2019 ಮತ್ತು 2020ರಲ್ಲಿ ಇವನ್ನು ಬಿಡುಗಡೆ ಮಾಡಲಾಗಿದೆ. ಈಗ ಅವುಗಳನ್ನು ಇಷ್ಯೂ ಮಾಡುವುದರ ವಿರುದ್ಧ ತಡೆಯಾಜ್ಞೆ ನೀಡಲು ಯಾವುದೇ ಸಮರ್ಥನೆ ಕಂಡುಬರುವುದಿಲ್ಲ’ ಎಂದು ಹೇಳಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ