Breaking News

ಬಿಜೆಪಿ ಟಿಕೆಟ್‌ ಹಂಚಿಕೆಯಲ್ಲಿ ಡೀಲ್‌ : ಖೂಬಾ

Spread the love

ಬೀದರ್‌: ‘ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಟಿಕೆಟ್‌ ಹಂಚಿಕೆಯಲ್ಲಿ ಡೀಲ್‌ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈಗ ನನಗೂ ಈ ಸಂಶಯ ಕಾಡುತ್ತಿದೆ’ ಎಂದು ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಹೇಳಿದರು.

‘ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಟಿಕೆಟ್‌ಅನ್ನು ಈ ತಾಲ್ಲೂಕು ಹಾಗೂ ಬೀದರ್‌ ಜಿಲ್ಲೆಯವರನ್ನು ಬಿಟ್ಟು ಬೇರೆ ಜಿಲ್ಲೆಯವರಿಗೆ ಕೊಡಲಾಗಿದೆ. ಡೀಲ್‌ ಆರೋಪ ಸತ್ಯವೋ, ಮಿಥ್ಯವೋ ತಿಳಿದುಕೊಳ್ಳಬೇಕಿದೆ’ ಎಂದು ಅವರು ಪ್ರತಿಕ್ರಿಯಿಸಿದರು.

‘ಬಿಜೆಪಿ, ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ನಂಬಿ ಜೆಡಿಎಸ್‌ ಶಾಸಕ ಇದ್ದಾಗಲೇ ಬಿಜೆಪಿ ಸೇರಿದ್ದೆ. ನನ್ನನ್ನು ಕಡೆಗಣಿಸಿ ಹೊರ ಜಿಲ್ಲೆಯವರಿಗೆ ಟಿಕೆಟ್ ನೀಡಲಾಗಿದೆ’ ಎಂದು ಅಸಮಾಧಾನ
ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಸ್ವಾವಲಂಬಿ ಬದುಕಿಗೆ ಆಸರೆಯಾದ ಕೈ ಕಸೂತಿ ಕೆಲಸ: ಇತರರಿಗೂ ಕಲಿಸುವ ಮೂಲಕ ಮಾದರಿಯಾದ ಪಶ್ಚಿಮ ಬಂಗಾಳ ಮಹಿಳೆ

Spread the loveಬೀದರ್, ಜೂನ್​ 02: ಅಂದು ದೇಶದಲ್ಲಿ ಕೋವಿಡ್​ ಸೋಂಕಿನಿಂದ ಮನುಕುಲವೇ ನಲುಗಿ ಹೋಗಿತ್ತು. ಅದೆಷ್ಟೋ ಜನರು ಕೆಲಸವಿಲ್ಲದೆ ಮನೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ