ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣದಲ್ಲಿ ಕೇಳಿ ಬಂದಿರುವ ಕಾಂಗ್ರೆಸ್ ‘ಮಹಾನಾಯಕ’ನ ರಾಜೀನಾಮೆಯನ್ನುಆ ಪಕ್ಷದ ಮಹಾನಾಯಕಿ ಕೂಡಲೇ ಪಡೆಯಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಆರಂಭದಿಂದಲೂ ಮಹಾನಾಯಕನ ಸುತ್ತಲೂ ಪ್ರಕರಣ ಗಿರಕಿ ಹೊಡೆಯುತ್ತಿತ್ತು. ಮಹಾನಾಯಕನ ಮನೆಯ ಬಳಿಗೆ ನಾನು ಬಂದಿದ್ದೇನೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾಳೆ. ಮಹಾನಾಯಕನಿಗೂ ಪ್ರಕರಣದ ಮಾಸ್ಟರ್ ಮೈಂಡ್ ಗಳಿಗೂ ಇರುವ ಸಂಬಂಧವವನ್ನು ಕರ್ನಾಟಕ ಕಾಂಗ್ರೆಸ್ ಬಹಿರಂಗಗೊಳಿಸಬೇಕು. ಆ ಪ್ರಕರಣದ ʼಸಂತ್ರಸ್ತೆ ನೇರವಾಗಿ ಮಹಾನಾಯಕನ ಹೆಸರು ಪ್ರಸ್ತಾಪ ಮಾಡಿದ್ದಾಳೆ. ಮಹಾನಾಯಕ ನಮ್ಮ ಜೊತೆ ಇದ್ದಾನೆ ಎಂಬ ಮಾತುಗಳನ್ನಾಡಿದ್ದಾಳೆ. ಸದನದಲ್ಲಿ ಬೊಬ್ಬಿರಿದ ಮಹಾಶೂರರು ಈಗೇನು ಹೇಳುತ್ತಾರೆ? ಕಾಂಗ್ರೆಸ್ ಕಚೇರಿಯಲ್ಲೇ ಷಡ್ಯಂತ್ರ ನಡೆದಿದೆಯೇ!? ಎಂದು ಪ್ರಶ್ನಿಸಿದ್ದಾರೆ.
ಅಲ್ಲದೆ ಈ ಕೂಡಲೇ ಕಾಂಗ್ರೆಸ್ ಪಕ್ಷ ಮಹಾನಾಯಕಿ ಸೋನಿಯಾಗಾಂಧಿ ಅವರು ಕರ್ನಾಟಕದ ಕಾಂಗ್ರೆಸ್ ಮಹಾನಾಯಕನ ರಾಜಿನಾಮೆ ಪಡೆಯಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಸಿಡಿ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಹೆಸರು ಪ್ರಸ್ತಾಪವಾಗಿದೆ. ಅನೈತಿಕ, ಅಧರ್ಮ ರಾಜಕಾರಣಕ್ಕೆ ಮುನ್ನುಡಿ ಬರೆದ ಮಹಾನಾಯಕನ ರಾಜೀನಾಮೆಯನ್ನು ರಾಷ್ಟ್ರೀಯ ಮಹಾನಾಯಕಿ ತಕ್ಷಣವೇ ಪಡೆಯಬೇಕು. ಒಬ್ಬ ಹೆಣ್ಣನ್ನು ದುರ್ಬಳಕೆ ಮಾಡಿಕೊಂಡು ಅಧಿಕಾರ ಪಡೆಯಲು ಷಡ್ಯಂತ್ರ ರೂಪಿಸಿದ ಕಾಂಗ್ರೆಸ್ ಜನತೆಯ ಕ್ಷಮಾಪಣೆ ಕೇಳಬೇಕು ಎಂದು ಕರ್ನಾಟಕ ಬಿಜೆಪಿ ಒತ್ತಾಯಿಸಿದೆ.
Laxmi News 24×7