Breaking News

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಳ : ಬೆಳಗಾವಿ ಗಡಿ ರಸ್ತೆಗಳು ಬಂದ್!

Spread the love

ಬೆಳಗಾವಿ : ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಗ್ರಾಮಗಳಿಂದ ನೆರೆ ರಾಜ್ಯ ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಬಂದ್ ಮಾಡಿಸಲಾಗುತ್ತಿದೆ.

 

ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರಕ್ಕೆ ಗಡಿಜಿಲ್ಲೆಯ ಗ್ರಾಮಗಳಿಂದ ಜನರು ಮಹಾರಾಷ್ಟ್ರಕ್ಕೆ ಹೋಗುತ್ತಿದ್ದಾರೆ. ಹೀಗಾಗಿ ಇದನ್ನು ತಪ್ಪಿಸಲು ಚಿಕ್ಕೋಡಿ ಹಾಗೂ ಅಥಣಿ ತಾಲೂಕಿನ ಅಧಿಕಾರಿಗಳೇ ರಸ್ತೆ ಬಂದ್ ಮಾಡಿಸಿದ್ದಾರೆ.

ಅಥಣಿ ಹಾಗೂ ಕಾಗವಾಡ ತಾಲೂಕಿನ ಹಲವು ಗ್ರಾಮಗಳ ಮೂಲಕ ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಬಂದ್ ಮಾಡಲು ತಾಲೂಕು ಆಡಳಿತ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ