Breaking News

ಯುವತಿಯ ಪೋಷಕರು ಡಿಕೆಶಿ ಬಗ್ಗೆ ಹೇಳಿರುವುದನ್ನು ಗಂಭೀರವಾಗಿ ಪರಿಗಣಿಸಬೇಕು: ಜೋಶಿ

Spread the love

ಬೆಳಗಾವಿ: ‘ನಮ್ಮ ಮಗಳನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಣ ಕೊಟ್ಟು ಗೋವಾಕ್ಕೆ ಕಳುಹಿಸಿದ್ದರು ಎಂದು ರಮೇಶ ಜಾರಕಿಹೊಳಿ ವಿರುದ್ಧದ ಸಿ.ಡಿ.ಯಲ್ಲಿ ಕಾಣಿಸಿಕೊಂಡ ಯುವತಿಯ ಪೋಷಕರು ಹೇಳಿಕೆ ನೀಡಿರುವುದನ್ನು ಎಸ್‌ಐಟಿಯವರು ಗಂಭೀರವಾಗಿ ಪರಿಗಣಿಸಬೇಕು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಒತ್ತಾಯಿಸಿದರು.

ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಪ್ರಕರಣ ಗೊಂದಲಕಾರಿಯಾಗಿದೆ. ತನಿಖಾ ಸಂಸ್ಥೆಯು ಕಾನೂನಾತ್ಮಕವಾಗಿ ತಾರ್ಕಿಕ ಅಂತ್ಯಕ್ಕೆ ಬೇಗನೆ ತೆಗೆದುಕೊಂಡು ಹೋಗಬೇಕು. ಯುವತಿಯ ಪೋಷಕರು ಮಾಡಿರುವ ಆರೋಪಗಳು ಗಂಭೀರ ಸ್ವರೂಪದ್ದಾಗಿವೆ’ ಎಂದು ಹೇಳಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ