Breaking News

ಇಂದಿನಿಂದ ರಾತ್ರಿ 8 ರಿಂದ ಬೆಳಗ್ಗೆ 7ರವರೆಗೆ ನೈಟ್ ಕರ್ಫ್ಯೂ ಜಾರಿ ..

Spread the love

ಮುಂಬೈ: ಇಂದಿನಿಂದ ಮಹಾರಾಷ್ಟ್ರದಲ್ಲಿ ರಾತ್ರಿ 8 ರಿಂದ ಬೆಳಗ್ಗೆ 7ರವರೆಗೆ ನೈಟ್ ಕರ್ಫ್ಯೂ ಜಾರಿಯಾಗಲಿದೆ. ನಿಯಮ ಮೀರಿದರೆ ಕಠಿಣ ಕ್ರಮಗಳನ್ನು ಕೈಗೊಳ್ಳುವುದಾಗಿ ಸರ್ಕಾರ ಸೂಚನೆಯನ್ನು ನೀಡಿದೆ.

ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಮಾರಕ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇದರ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಇಂದಿನಿಂದ (ಮಾರ್ಚ್ 28) ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ವಿಧಿಸಿದೆ. ಮುಂದಿನ ಆದೇಶದವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿ ಇರುತ್ತದೆ ಎಂದು ಮುಖ್ಯಮಂತ್ರಿ ಕಚೇರಿಯಿಂದ ಸೂಚನೆಯನ್ನು ನೀಡಲಾಗಿದೆ.ಭಾರತದಲ್ಲಿ ಶನಿವಾರ 62,714 ಹೊಸ ಕೊರೊನವೈರಸ್ ಸೋಂಕಿನ ಪ್ರಕರಣಗಳನ್ನು ವರದಿ ಆಗಿವೆ. ಭಾರತವು ಶನಿವಾರ ದಾಖಲಿಸಿದ ಒಟ್ಟು ಪ್ರಕರಣಗಳಲ್ಲಿ ಮಹಾರಾಷ್ಟ್ರದಲ್ಲಿ ಮಾತ್ರ 35,726 ಹೊಸ ಪ್ರಕರಣಗಳು ದಾಖಲಾಗಿವೆ. 3,162 ಪ್ರಕರಣ, ಛತ್ತೀಸ್‍ಗಢದಲ್ಲಿ ಪಂಜಾಬ್‍ಗಿಂತ ಹೆಚ್ಚಿನ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿವೆ. ಭಾರತದಲ್ಲಿ ಸಕ್ರಿಯ ಪ್ರಕರಣಗಳು 4.86 ಲಕ್ಷಕ್ಕಿಂತ ಹೆಚ್ಚಾಗಿದೆ. ಶನಿವಾರ 312 ಜನರು ವೈರಸ್‍ಗೆ ತುತ್ತಾಗಿದ್ದಾರೆ.


Spread the love

About Laxminews 24x7

Check Also

ಹಾಸನ ಜನರ ಹೃದಯ ಹಿಂಡುತ್ತಿರುವ ಹೃದಯಾಘಾತ: ಕೊನೆಗೂ ಎಚ್ಚೆತ್ತ ಜಿಲ್ಲಾಡಳಿತ

Spread the loveಹಾಸನ, ಜೂನ್​ 30: ಹಾಸನ (Hassan) ಜಿಲ್ಲೆಯಲ್ಲಿ ಹೃದಯಘಾತದಿಂದ (Heart Attack) ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಹಾಸನ ಜಿಲ್ಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ