Breaking News
Home / ರಾಜ್ಯ / ಉಪ ಚುನಾವಣೆ: ಬೆಳಗಾವಿಗೆ ಡಿಕೆ ಶಿವಕುಮಾರ್ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಭೇಟಿ

ಉಪ ಚುನಾವಣೆ: ಬೆಳಗಾವಿಗೆ ಡಿಕೆ ಶಿವಕುಮಾರ್ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಭೇಟಿ

Spread the love

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಭಾನುವಾರನಗರಕ್ಕೆ ಭೇಟಿ

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿ ಸತೀಶ ಜಾರಕಿಹೊಳಿ ಪರವಾಗಿ ಪ್ರಚಾರ ಕಾರ್ಯತಂತ್ರ ರೂಪಿಸುವುದಕ್ಕಾಗಿ ಅವರು ಪ್ರವಾಸ ಕೈಗೊಂಡಿದ್ದಾರೆ. ಸಾಂಬ್ರಾ ವಿಮಾನನಿಲ್ದಾಣಕ್ಕೆ ಬರುವ ಅವರು, ಸಂಜೆ 7ಕ್ಕೆ ಕಾಂಗ್ರೆಸ್‌ ನಾಯಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ಮಾರ್ಚ್‌ 29ರಂದು ಬೆಳಿಗ್ಗೆ 11ಕ್ಕೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪಕ್ಷದ ಅಭ್ಯರ್ಥಿಯೊಂದಿಗೆ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರು ಮಾರ್ಚ್‌ 29ರಂದು ಬೆಳಿಗ್ಗೆ 10ಕ್ಕೆ ಸಾಂಬ್ರಾ ವಿಮಾನನಿಲ್ದಾಣಕ್ಕೆ ಆಗಮಿಸುವರು. ನಂತರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಮೂವರೂ ನಾಯಕರು ಮಧ್ಯಾಹ್ನ 12ಕ್ಕೆ ಇಲ್ಲಿಂದ ಹೆಲಿಕಾಪ್ಟರ್‌ನಲ್ಲಿ ಮಸ್ಕಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.

ತಮ್ಮ ವಿರುದ್ಧದ ಸಿಡಿ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಅವರು ಷಡ್ಯಂತ ರೂಪಿಸಿದ್ದಾರೆ ಎಂದು ಆರೋಪಿಸಿರುವ ರಮೇಶ ಜಾರಕಿಹೊಳಿ, ಇದೇ ಜಿಲ್ಲೆಯ‌ ಗೋಕಾಕ ಕ್ಷೇತ್ರದ ಶಾಸಕರಾಗಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ