Home / ಜಿಲ್ಲೆ / ಬೆಳಗಾವಿ / ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷರಿಗೆ ಚಪ್ಪಲಿ ಎಸೆದು ಸ್ವಾಗತ ಸ್ವಾಗತ

ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷರಿಗೆ ಚಪ್ಪಲಿ ಎಸೆದು ಸ್ವಾಗತ ಸ್ವಾಗತ

Spread the love

ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸೋಮವಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಭಾನುವಾರ ಬೆಳಗಾವಿಗೆ ಆಗಮಿಸಿದರು.

ರಾಮಲಿಂಗಾರೆಡ್ಡಿ ಅವರ ಜೊತೆಗೆ ಆಗಮಿಸಿದ ಶಿವಕುಮಾರ ಅವರಿಗೆ ವಿಮಾನ ನಿಲ್ದಾಣದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸೇರಿದಂತೆ ಕಾಂಗ್ರೆಸ್ ಮುಖಂಡರು, ಶಾಸಕರು ಅದ್ಧೂರಿಯಾಗಿ ಸ್ವಾಗತಕೋರಿದರು.

ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ನ ಎಲ್ಲ ಮುಖಂಡರೂ ಸೇರಿ ಒಮ್ಮತದಿಂದ ಅಭ್ಯರ್ಥಿಯನ್ನಾಗಿಸಿದ್ದೇವೆ. ಒಳ್ಳೆಯ ಜನ ಬೆಂಬಲ ಸಿಗುತ್ತಿದೆ. ಬಿಜೆಪಿ ಸರಕಾರದ ವೈಫಲ್ಯವೇ ಕಾಂಗ್ರೆಸ್ ಪಕ್ಷದ ಸಕ್ಸಸ್ ಗೆ ಕಾರಣವಾಗಲಿದೆ ಎಂದು ಶಿವಕುಮಾರ ಹೇಳಿದರು.

ಬಿಜೆಪಿ ನುಡಿದಂತೆ ನಡೆಯಲಿಲ್ಲ. ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಕೊರೋನಾ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಹಾಗಾಗಿ ನಾವು ಬೆಳಗಾವಿಯಲ್ಲಿ ಸುಲಭವಾಗಿ ಗೆಲುವು ಸಾಧಿಸುತ್ತೇವೆ ಎಂದರು.ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ನಗರಾಧ್ಯಕ್ಷ ರಾಜು ಸೇಠ್ ಸೇರಿದಂತೆ ಹಲವಾರು ಮುಖಂಡರು, ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ಚುನಾವಣೆ ಬರಬಾರದಿತ್ತು. ಸುರೇಶ ಅಂಗಡಿ ಅವರ ಅಕಾಲಿಕ ನಿಧನದಿಂದಾಗಿ ಅನಿವಾರ್ಯವಾಗಿ ಚುನಾವಣೆ ಎದುರಿಸಬೇಕಾಗಿ ಬಂದಿದೆ ಎಂದೂ ಅವರು ಹೇಳಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ