ಬೀದರ್: ದೆಹಲಿ ಜಮಾತ್‍ನಿಂದ ಬಂದಿದ್ದ 17 ಜನರ ಕೊರೊನಾ ವೈದ್ಯಕೀಯ ವರದಿ ನೆಗಟಿವ್ ಬಂದಿದೆ ಎಂದು ಬೀದರ್ ಜಿಲ್ಲಾಧಿಕಾರಿ ಹೆಚ್.ಆರ್.ಮಹಾದೇವ್
ಕೊರೊನಾ ಮಹಾಮಾರಿಗೆ ಗಡಿ ಜಿಲ್ಲೆ ಬೀದರ್ ತತ್ತರಿಸಿ ಹೋಗಿದೆ. ಜಮಾತ್ ಧಾರ್ಮಿಕ ಕಾರ್ಯಕ್ರಮ ಕಂಟವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿ, ಜಮಾತ್ ಗೆ ಹೋಗಿದ್ದ ಬೀದರ್ ಮೂಲದ 28 ಜನರಲ್ಲಿ 10 ಜನರಿಗೆ ಈಗಾಗಾಲೇ ಕೊರೊನಾ ಸೋಂಕು ಧೃಡ ಪಟ್ಟಿದೆ. ಅನುಮಾವಿದ್ದ ಕಾರಣ ಇನ್ನೊಬ್ಬರ ವರದಿ ಬಾಕಿಯಿದೆ. ಉಳಿದ 17 ಜನರ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಎಚ್.ಆರ್ ಮಹಾದೇವ ಮಾಹಿತಿ ನೀಡಿದ್ದಾರೆ.


ಸೋಂಕಿತರ ಜೊತೆ ಸಂಪರ್ಕದಲ್ಲಿದ್ದ 82 ಜನರನ್ನು ಐಸೋಲೇಷನ್ ವಾಡ್9 ನಲ್ಲಿರಿಸಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗುತ್ತಿದೆ. ಸೋಂಕಿತರ ಸಂಪರ್ಕದಲ್ಲಿರುವವರನ್ನ ಪತ್ತೆ ಹಚ್ಚಲು ಮೂರು ಪ್ರದೇಶದಿಂದ ಒಟ್ಟು 120 ಜನರ ಟೀಂ ಮಾಡಲಾಗಿದೆ. ಈ ಟೀಂ ಪ್ರತಿ ಮನೆಗೆ ಹೋಗಿ ಮಾಹಿತಿಯನ್ನ ಕಲೆ ಹಾಕುತ್ತಿದೆ. ಜಿಲ್ಲೆಯ ಜನರು ಹೆಚ್ಚು ಆತಂಕಪಡುವ ಅಗತ್ಯವಿಲ್ಲ ಎಂದು ಬೀದರ್ ನಲ್ಲಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
Laxmi News 24×7