Breaking News

ಮಲಗಿದ್ದ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ..!

Spread the love

ಹಾಸನ,ಮಾ.28-ಬಸ್ ನಿಲ್ದಾಣದಲ್ಲಿ ಪೋಷಕರೊಂದಿಗೆ ಮಲಗಿದ್ದ ಬಾಲಕಿಯನ್ನು ಹೊತ್ತೊಯ್ದ ಕಾಮುಕ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಮನಗರ ಮೂಲದ ಅಲೆಮಾರಿ ಕುಟುಂಬವೊಂದು ಹಾಸನದ ಹೊಸ ಬಸ್ ನಿಲ್ದಾಣಕ್ಕೆ ಬಂದಿದೆ.

ರಾತ್ರಿ ಪೋಷಕರೊಂದಿಗೆ ಮಲಗಿದ್ದ ಆರು ವರ್ಷದ ಬಾಲಕಿಯನ್ನು ಕಾಮುಕ ಎತ್ತಿಕೊಂಡು ಹೋಗಿ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ. ಬೆಳಗ್ಗೆ ವಿಷಯ ಗೊತ್ತಾಗಿದೆ. ಪೊಲೀಸರ ಮೊರೆಹೋದ ಬಾಲಕಿಯ ಕುಟುಂಬ ದೂರು ನೀಡಿದೆ.

ಪೊಲೀಸರು ಸ್ಥಳಕ್ಕಾಗಮಿಸಿ ಸಿಸಿಕ್ಯಾಮೆರಾವನ್ನು ಪರಿಶೀಲಿಸಿದಾಗ ಬಾಲಕಿಯನ್ನು ಎತ್ತಿಕೊಂಡು ಹೋಗುವ ದೃಶ್ಯ ಸೆರೆಯಾಗಿರುವುದು ಕಂಡುಬಂದಿದೆ. ಸಂತ್ರಸ್ತ ಬಾಲಕಿಗೆ ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹಾಸನದ ಬಡಾವಣೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಿಸಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ಕಾಮುಕನ ಪತ್ತೆಗೆ ಬಲೆ ಬೀಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ