Breaking News

ಇಂದೇ ತನ್ನ ಹೇಳಿಕೆ ದಾಖಲಿಸುತ್ತಾರೆಯೇ ಸಿಡಿ ಲೇಡಿ?

Spread the love

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಸೇರಿದ್ದು ಎನ್ನಲಾದ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಇಂದೇ ತನ್ನ ಹೇಳಿಕೆ ದಾಖಲಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಯುವತಿ ಯಾವುದೇ ಕ್ಷಣದಲ್ಲಾದರೂ ಕೋರ್ಟ್ ಮುಂದೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ಕೂಡ ಯುವತಿ ಭದ್ರತೆಗಾಗಿ ಓರ್ವ ಮಹಿಳಾ ಪಿಎಸ್ ಐ ಸೇರಿದಂತೆ 8 ಮಹಿಳಾ ಪೊಲೀಸ್ ಸಿಬ್ಬಂದಿಯ ತಂಡ ರಚಿಸಿದ್ದು, ಯುವತಿ ಹೇಳಿದ್ದಲ್ಲಿಗೆ ತೆರಳಿ ಭದ್ರತೆ ಒದಗಿಸಲು ಮುಂದಾಗಿದೆ ಎಂದು ತಿಳಿದು ಬಂದಿದೆ.

ಇಂದು ಬೆಳಿಗ್ಗೆ ಯುವತಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರಿಗೆ ಬರೆದಿದ್ದ ಪತ್ರ ವೈರಲ್ ಆಗಿತ್ತು. ಈ ಪತ್ರದಲ್ಲಿ ಮಾಜಿ ಸಚಿವರಿಂದ ತಮಗೆ ಜೀವ ಬೆದರಿಕೆ ಇದ್ದು, ತನಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಮನವಿ ಮಾಡಿದ್ದರು.

ಅಲ್ಲದೇ, ತಮ್ಮ ತಂದೆ – ತಾಯಿಯಂದ ಬಲವಂತವಾಗಿ ಹೇಳಿಕೆ ಕೊಡಿಸಲಾಗುತ್ತಿದೆ. ರಮೇಶ್ ಜಾರಕಿಹೊಳಿ ಅವರು ಪ್ರಭಾವಿ ವ್ಯಕ್ತಿಯಾಗಿದ್ದು, ಸಾರ್ವಜನಿಕವಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದರು.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ