Breaking News

ಬೆಳಗಾವಿ ಲೋಕಸಭೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

Spread the love

ಬೆಳಗಾವಿ : ಬೆಳಗಾವಿ ಲೋಕಸಭೆ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಿದ್ದಾರೆ.

ನಗರದ ಆರ್ ಟಿಒ ನಗರದಲ್ಲಿರುವ ಕಾಂಗ್ರೆಸ್ ಭವನದಿಂದ ಮೂರು ವಾಹನಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಸತೀಶ್ ಜಾರಕಿಹೊಳಿ ಹಸಿರು ಶಾಲು ಧರಿಸಿ ನಾಮಪತ್ರ ಸಲ್ಲಿಸಿದ್ದಾರೆ. ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸಾಥ್ ನೀಡಿದರು.

ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಉಪ ಚುನಾವಣೆ ಗೆಲ್ಲಲು ತಂತ್ರಗಳನ್ನು ರೂಪಿಸುತ್ತಿವೆ. ಚುನಾವಣಾ ಕಣದಲ್ಲಿ ಎರಡೂ ಪಕ್ಷಗಳ ಪ್ರಾಬಲ್ಯ ಕಾಣುತ್ತಿದ್ದು, ನೇರ ಪೈಪೋಟಿ ನಿರೀಕ್ಷೆ ಮಾಡಲಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ