Breaking News

ವಿಷ್ಣು ಪ್ರಿಯ ಟ್ರೈಲರ್ ಬಿಡುಗಡೆ ಮಾಡಿದ ಪವರ್ ಸ್ಟಾರ್!

Spread the love

ಇಂದು ಬೆಳಿಗ್ಗೆ ನಿರ್ಮಾಪಕ ಕೆ. ಮಂಜು ಪುತ್ರ ಶ್ರೇಯಸ್ ಮಂಜು ಮತ್ತು ಪ್ರಿಯಾ ವಾರಿಯರ್ ನಟಿಸಿರುವ ವಿಷ್ಣು ಪ್ರಿಯ ಚಿತ್ರದ ಟ್ರೈಲರ್ ಅನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಬಿಡುಗಡೆ ಮಾಡಿದರು.

ಔಟ್ ಅಂಡ್ ಔಟ್ ಪ್ರೇಮ ಕಥಾ ಹಂದರ ಹೊಂದಿರುವ ಟ್ರೈಲರ್ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದು ಕೇವಲ ಎರಡು ಗಂಟೆಯೊಳಗೆ 80000 ವೀಕ್ಷಣೆ ಕಂಡಿದೆ.

ಚಿತ್ರಕ್ಕೆ ಮಲಯಾಳಂ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ವಿಕೆ ಪ್ರಕಾಶ್ ನಿರ್ದೇಶನವಿದೆ. ಈ ಹಿಂದೆ ಪ್ರಕಾಶ್ ಐದೊಂದ್ಲ ಐದು ಸಿನಿಮಾ ನಿರ್ದೇಸಿದ್ದರು. ಶ್ರೇಯಸ್ ಮಂಜು, ಪ್ರಿಯ ವಾರಿಯರ್, ಅಚ್ಯುತ್ ರಾವ್, ಸುಚೇಂದ್ರ ಪ್ರಸಾದ್ ಸೇರಿದಂತೆ ಬಹು ತಾರಗಣವಿರುವ ಈ ಚಿತ್ರಕ್ಕೆ ದಕ್ಷಿಣ ಭಾರತದ ಹೆಸರಾಂತ ಸಂಗೀತ ನಿರ್ದೇಶಕರಾದ ಗೋಪಿ ಸುಂದರ್ ಅವರ ಸಂಗೀತ, ಸುರೇಶ್ ಅರಸ್ ಸಂಕಲನ, ವಿನೋದ್ ಭಾರತಿ ಛಾಯಾಗ್ರಹಣವಿದೆ. ಚಿತ್ರವನ್ನ ಕೆ. ಮಂಜು ಅವರು ಕೆ. ಮಂಜು ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸುತ್ತಿದ್ದಾರೆ.


Spread the love

About Laxminews 24x7

Check Also

ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್..

Spread the love ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್.. ರಾಣಾ-ಪ್ರಿಯಾಂಕಾ ಜೋಡಿಯ ಏಳುಮಲೆ ಸಿನಿಮಾದ‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ