Breaking News

ಬೆಂಜ್ ಕಾರು ಖರೀದಿಸಿದ ‘ಕನ್ನಡತಿ’ ಖ್ಯಾತಿಯ ಕಿರಣ್ ರಾಜ್

Spread the love

‘ಕನ್ನಡತಿ’ ಧಾರಾವಾಹಿ ಮೂಲಕ ಕಿರುತೆರೆ ಪ್ರೇಕ್ಷಕರ ನೆಚ್ಚಿನ ನಟ ಎನಿಸಿಕೊಂಡಿರುವ ಕಿರಣ್ ರಾಜ್ ಹೊಸ ಕಾರು ಖರೀದಿ ಮಾಡಿದ್ದಾರೆ. ಕಾರು ಖರೀದಿ ಮಾಡಿ ದೇವಸ್ಥಾನಕ್ಕೆ ಭೇಟಿ ನೀಡಿರುವ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಕಿರಣ್ ರಾಜ್ ಅವರ ಈ ಪೋಸ್ಟ್ ನೋಡಿದ ಅಭಿಮಾನಿಗಳು ಖುಷಿಯಾಗಿದ್ದು, ಶುಭಾಶಯ ತಿಳಿಸಿದ್ದಾರೆ. ಯಾವ ಖುಷಿಗೆ ಕಾರು ಖರೀದಿಸಿದ್ದಾರೆ ಎಂದು ಕೇಳಿದ್ದಾರೆ.

ಅಂದ್ಹಾಗೆ, ಕಿರಣ್ ರಾಜ್ ಕಪ್ಪು ಬಣ್ಣ ಮರ್ಸಿಡಿಸ್ ಬೆಂಜ್ ಕಾರು ಖರೀದಿ ಮಾಡಿದ್ದಾರೆ.

ಕಿರಣ್ ರಾಜ್ ಕುರಿತು

ಕಿರಣ್ ರಾಜ್ ಕಿರುತೆರೆ ಮತ್ತು ಸಿನಿಮಾಗಳಲ್ಲಿ ನಟಿಸಿರುವ ಕಲಾವಿದ. ಜೊತೆಗೆ ಕೆಲವು ರಿಯಾಲಿಟಿ ಶೋಗಳಲ್ಲಿಯೂ ಭಾಗವಹಿಸಿದ್ದಾರೆ. ಹಿಂದಿಯ ಧಾರಾವಾಹಿಯಲ್ಲೂ ಅಭಿನಯಿಸಿದ್ದಾರೆ.

ಕೊಡ್ಲು ರಾಮಕೃಷ್ಣ ನಿರ್ದೇಶನದ ಮಾರ್ಚ್ 22 ಸಿನಿಮಾದಲ್ಲಿ ಕಿರಣ್ ರಾಜ್ ನಟಿಸಿದರು. ನಂತರ ಅಸತೋಮ ಸದ್ಗಮಯ ಸಿನಿಮಾದಲ್ಲಿ ಅಭಿನಯಿಸಿದರು. ಸದ್ಯ, ಕನ್ನಡತಿ ಧಾರಾವಾಹಿಯಲ್ಲಿ ನಾಯಕನಟನಾಗಿ ಕಾಣಿಸಿಕೊಳ್ಳುತ್ತಿದ್ದು, ಹೆಚ್ಚು ಜನಪ್ರಿಯತೆ ತಂದುಕೊಟ್ಟಿದೆ.

 


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ