ಬೆಳಗಾವಿ,ಮಾ.30- ಸಿದ್ದರಾಮಯ್ಯನವರು ಯಾರ ಗುಲಾಮರು ಎಂದು ದೇಶಕ್ಕೆ ಗೊತ್ತಿದೆ. ಅವರು ಯಾರ ಕಾಲು ಹಿಡಿದು ಮುಖ್ಯಮಂತ್ರಿಯಾಗಿದ್ದರು ಎಂಬುದೂ ಗೊತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಸಂಸದರು ಕೇಂದ್ರ ಸರ್ಕಾರದ ಗುಲಾಮರು ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿ, ಅವರು ಯಾರ ಗುಲಾಮರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ತಿರುಗೇಟು ನೀಡಿದರು.ಸಿ.ಡಿ ವಿಚಾರ ತನಿಖೆ ಹಂತದಲ್ಲಿದೆ. ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ಸಿ.ಡಿಗಳು ಯಾವ ರೀತಿ ತನಿಖೆಯಾಗಿದೆ ಎಂಬುದು ಗೊತ್ತಿದೆ ಎಂದರು.
ಅವರಿಗೆ ಸಿಬಿಐ, ಐಟಿ, ಎಸ್‍ಐಟಿ ಮೇಲೆ ನಂಬಿಕೆ ಇಲ್ಲ. ಅಷ್ಟಕ್ಕೂ ಅವರಿಗೆ ಸ್ವತಃ ಅವರ ಮೇಲೆಯೇ ನಂಬಿಕೆ ಇಲ್ಲ ಎಂದು ಲೇವಡಿ ಮಾಡಿದರು. ಉಪಚುನಾವಣೆಯಲ್ಲಿ ಗೆಲುವು ನಮ್ಮದೆ ಎಂದ ಅವರು, ಇಂದು ಬೆಳಗಾವಿ ಲೋಕಸಭೆ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಮಂಗಳ ಅಂಗಡಿ ನಾಮಪತ್ರ ಸಲ್ಲಿಸಿದ್ದಾರೆ. ನಮ್ಮ ಉತ್ತಮ ಕೆಲಸಗಳು ನಮ್ಮ ಪಕ್ಷದ ಕೈ ಹಿಡಿಯಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Laxmi News 24×7