Breaking News

ಮಹಾರಾಷ್ಟ್ರ ಮೂಲದ ಕಾರಿನಲ್ಲಿ ಹಣ ಘಟಪ್ರಭಾ ಚೆಕ್ ಪೋಸ್ಟ್ ನಲ್ಲಿ 42.71 ಲಕ್ಷ ನಗದು ವಶ

Spread the love

ಬೆಳಗಾವಿ: ಸಮರ್ಪಕ ದಾಖಲೆಗಳಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 42.71 ಲಕ್ಷ ರೂಪಾಯಿ ನಗದು ಹಣವನ್ನು ಘಟಪ್ರಭಾ ಬಳಿಯ ಚೆಕ್ ಪೋಸ್ಟ್ ನಲ್ಲಿ ಬುಧವಾರ(ಮಾ.31) ವಶಪಡಿಸಿಕೊಳ್ಳಲಾಗಿದೆ.

ಉಪ ಚುನಾವಣೆ ಹಿನ್ನೆಲೆಯಲ್ಲಿ ಘಟಪ್ರಭಾ ಬಳಿ ಸ್ಥಾಪಿಸಲಾಗಿರುವ ಚೆಕ್ ಪೋಸ್ಟ್ ನಲ್ಲಿ ಚುನಾವಣಾ ಕಾರ್ಯನಿರತ ಎಸ್.ಎಸ್.ಟಿ. ತಂಡವು ಮಹಾರಾಷ್ಟ್ರ ಮೂಲದ ಕಾರು ತಪಾಸಣೆ ನಡೆಸಿದಾಗ ನಗದು ಹಣ ಪತ್ತೆಯಾಗಿದೆ.

ಮಂಗಸೂಳಿ ಮಾರ್ಗವಾಗಿ ಯರಗಟ್ಟಿ ಕಡೆಗೆ ಹೊರಟಿದ್ದ ಕಾರಿನಲ್ಲಿ ಈ ಹಣ ಪತ್ತೆಯಾಗಿದ್ದು, ಸೂಕ್ತ ದಾಖಲಾತಿಗಳು ಇಲ್ಲದಿರುವುದರಿಂದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಚುನಾವಣಾ ಆಯೋಗದ ಮಾರ್ಗಸೂಚಿಯ ಪ್ರಕಾರ ಸದರಿ ಹಣವನ್ನು ಖಜಾನೆಗೆ ಒಪ್ಪಿಸಿ ಪ್ರಕರಣವನ್ನು ಆದಾಯ ತೆರಿಗೆ ಇಲಾಖೆಗೆ ವರ್ಗಾಯಿಸಲಾಗಿದೆ.

ಚೆಕ್ ಪೋಸ್ಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉಮೇಶ್ ಮನಗೂಳಿ‌ ನೇತೃತ್ವದ ಎಸ್.ಎಸ್.ಟಿ. ತಂಡವು ಕಾರ್ಯಾಚರಣೆಯನ್ನು ನಡೆಸಿದೆ.


Spread the love

About Laxminews 24x7

Check Also

ದರ್ಗಾ ಮೇಲೆ ಬಾಣ ಬಿಟ್ಟಂತ ಸನ್ನೆ: ಬೆಳಗಾವಿಯಲ್ಲಿ ಏಳು ಜನರ ಮೇಲೆ ಎಫ್ಐಆರ್ ದಾಖಲು

Spread the love ಬೆಳಗಾವಿ: ಶೋಭಾ ಯಾತ್ರೆ ವೇಳೆ ಹಿಂದೂ ನಾಯಕಿಯೊಬ್ಬರು ದರ್ಗಾ ಬಳಿ ಬಾಣ ಬಿಟ್ಟಂತೆ ಸನ್ನೆ ಮಾಡಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ