Breaking News

ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರೊಂದಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬುಧವಾರ ಅಬ್ಬರದ ಪ್ರಚಾರ

Spread the love

ಬೆಳಗಾವಿ: ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಉಚಗಾಂವ ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರೊಂದಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬುಧವಾರ ಅಬ್ಬರದ ಪ್ರಚಾರ ನಡೆಸಿದರು.
ಸತೀಶ ಹಾಗೂ ಲಕ್ಷ್ಮಿ ಅವರು ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ವಾಧ್ಯಮೇಳಗಳನ್ನು ಬಾರಿಸುವ ಮೂಲಕ ಅದ್ಧೂರಿ ಸ್ವಾಗತ ಕೋರಿದರು. ಸತೀಶ ಅವರ ಪರ ಜೈಘೋಷಗಳನ್ನು ಕೂಗಿದರು.
ಪ್ರಚಾರದ ಸಂದರ್ಭದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳಕರ್, “ಸತೀಶ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷದ ಶಕ್ತಿ. ಅವರು ಕಳೆದ 30 ವರ್ಷಗಳಿಂದ ಹಲವಾರು ಅಭಿವೃದ್ಧಿ ಕಾರ್ಯಗಳು, ಸಾಮಾಜಿಕ ಚಟುವಟಿಕೆಗಳು ಸೇರಿದಂತೆ ಸಮಾಜದ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ನಾಯಕರಾಗಿದ್ದಾರೆ. ಹೀಗಾಗಿ, ಏಪ್ರಿಲ್ 17 ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಅತಿ ಹೆಚ್ಚು ಮತಗಳ ಅಂತರದಿಂದ ಸತೀಶ ಅಣ್ಣಾ ಅವರನ್ನು ಗೆಲ್ಲಿಸುವ ಮೂಲಕ ದಿಲ್ಲಿಗೆ ಸಂದೇಶ ರವಾನಿಸಬೇಕಾಗಿದೆ” ಎಂದು ಹೇಳಿದರು.
ಸತೀಶ ಗೆಲುವಿಗೆ ಶಪಥ:
“ಸತೀಶ ಜಾರಕಿಹೊಳಿ ಅವರ ಗೆಲುವಿಗೆ ಕ್ಷೇತ್ರದ ಪ್ರತಿಯೊಬ್ಬ ಕಾರ್ಯಕರ್ತರು ಹಗಲು-ರಾತ್ರಿ ಎನ್ನದೇ ಶ್ರಮಿಸುತ್ತೇವೆ” ಎಂದು ಲಕ್ಷ್ಮಿ ಹೆಬ್ಬಾಳಕರ್ ಅವರು ಕಾರ್ಯಕರ್ತರಿಂದ ಶಪಥ ಮಾಡಿಸಿದರು. ಸತೀಶ ಹಾಗೂ ಲಕ್ಷ್ಮಿ ಅವರ ಸಮ್ಮುಖದಲ್ಲೇ ನೂರಾರು ಕಾರ್ಯಕರ್ತರು ಶಪಥಗೈದರು.
“ಬೆಳಗಾವಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, ಇದನ್ನು ನಾವು ಇನ್ನಷ್ಟು ಭದ್ರಗೊಳಿಸೋಣ” ಎಂದು ಕಾರ್ಯಕರ್ತರಿಗೆ ಲಕ್ಷ್ಮಿ ಕರೆ ನೀಡಿದರು.
ಗ್ರಾಮೀಣ ಕ್ಷೇತ್ರದ ಮತದಾರರ ಬಗ್ಗೆ ಸತೀಶ ಮೆಚ್ಚುಗೆ:
ಅಭ್ಯರ್ಥಿ ಸತೀಶ ಜಾರಕಿಹೊಳಿ ಮಾತನಾಡಿ, “ಗ್ರಾಮೀಣ ಕ್ಷೇತ್ರದ ಜನರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸಿದಂತೆ, ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ನನ್ನನ್ನು ಗೆಲ್ಲಿಸಬೇಕು. ಇದರಿಂದ ಶಾಸಕರು ಹಾಗೂ ಸಂಸದರು ಸೇರಿ ಮತಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ” ಎಂದು ಹೇಳಿದರು.
“ಗ್ರಾಮೀಣ ಮತಕ್ಷೇತ್ರದ ಜನರೊಂದಿಗೆ ಮೊದಲಿನಿಂದಲೂ ನನಗೆ ನಿಕಟ ಸಂಪರ್ಕವಿದೆ. ಇಲ್ಲಿನ ಮತದಾರರು ಯಾವಾಗಲು ಕಾಂಗ್ರೆಸ್ ಪರವಾಗಿಯೇ ಇದ್ದಾರೆ. ಈ ಚುನಾವಣೆಯಲ್ಲೂ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ” ಎಂದು ಗ್ರಾಮೀಣ ಮತದಾರರ ಬಗ್ಗೆ ಸತೀಶ ಮೆಚ್ಚುಗೆ ವ್ಯಕ್ತಪಡಿಸಿದರು.
 

Spread the love

About Laxminews 24x7

Check Also

ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ

Spread the love ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ