Breaking News

ರಾಜ್ಯದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

Spread the love

ಬೆಂಗಳೂರು : ರಾಜ್ಯದ ಡಿಪ್ಲೊಮಾ ವಿದ್ಯಾರ್ಥಿಗಳ ಸೆಮಿಸ್ಟರ್ ಪರೀಕ್ಷಾ ಶುಲ್ಕ ಪಾವತಿಗೆ ಏಪ್ರಿಲ್ 3 ರವರೆಗೂ ಅವಕಾಶ ನೀಡಲಾಗಿದೆ.

 

ಡಿಪ್ಲೊಮಾ ಸೆಮಿಸ್ಟರ್ ಪರೀಕ್ಷೆಗೆ ಶುಲ್ಕ ಪಾವತಿಸದ ವಿದ್ಯಾರ್ಥಿಗಳಿಗೆ ದಂಡಶುಲ್ಕದೊಂದಿಗೆ ಪಾವತಿಸಲು ಏಪ್ರಿಲ್ 3 ರವರೆಗೆ ಅವಕಾಶ ನೀಡಲಾಗಿದೆ. ಈ ಸೆಮಿಸ್ಟರ್ ಪರೀಕ್ಷೆಗೆ ಅನ್ವಯವಾಗುವಂತೆ 2 ಸಾವಿರ ರೂ ದಂಡ ಶುಲ್ಕದೊಂದಿಗೆ ಪರೀಕ್ಷಾ ಶುಲ್ಕವನ್ನು ಏಪ್ರಿಲ್ 3 ರೊಳಗೆ ಪಾವತಿಸುವಂತೆ ಸೂಚನೆ ನೀಡಲಾಗಿದೆ.

 

ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಡಿಪ್ಲೊಮಾ ಸೆಮಿಸ್ಟರ್ ಪರೀಕ್ಷೆಗೆ ಶುಲ್ಕ ಪಾವತಿಸಲು ಮಾರ್ಚ್ 20 ಕೊನೆಯ ದಿನವಾಗಿತ್ತು. ಕೋವಿಡ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಕೋರಿಕೆಯಂತೆ ದಂಡ ಶುಲ್ಕದೊಂದಿಗೆ ಪರೀಕ್ಷಾ ಶುಲ್ಕ ಪಾವತಿಸಲು ಅಂತಿಮ ಅವಕಾಶ ಕಲ್ಪಿಸಲಾಗಿದೆ.


Spread the love

About Laxminews 24x7

Check Also

ಸನ್ನಡತೆ ಆಧಾರದ ಮೇಲೆ ರಾಜ್ಯದ 9 ಜೈಲಿನಿಂದ 31 ಕೈದಿಗಳ ಬಿಡುಗಡೆ

Spread the loveಬೆಂಗಳೂರು: ರಾಜ್ಯದ ವಿವಿಧ ಜೈಲಿನಿಂದ ಸನ್ನಡತೆ ಆಧಾರದ ಮೇಲೆ 31 ಕೈದಿಗಳನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ