Breaking News
Home / ರಾಜ್ಯ / ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಯುವತಿ ಸಹೋದರ

ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಯುವತಿ ಸಹೋದರ

Spread the love

ವಿಜಯಪುರ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿರುವ ಯುವತಿ ಸಹೋದರ ಮತ್ತೊಂದು ಬಾಂಬ್ ಸಿಡಿಸಿದ್ದು, ನಮ್ಮ ಬಳಿ 11 ಆಡಿಯೋ ಸಾಕ್ಷ್ಯಗಳಿವೆ. ಅದರಲ್ಲಿ ಎರಡನ್ನು ಮಾತ್ರ ಈಗಗಾಲೇ ಎಸ್ ಐಟಿ ಅಧಿಕಾರಿಗಳಿಗೆ ನೀಡಿದ್ದೇವೆ ಎಂದರು.

ಇನ್ನುಳಿದ 9 ಆಡಿಯೋ ಸಾಕ್ಷ್ಯಗಳನ್ನು ಸೂಕ್ತ ಸಮಯದಲ್ಲಿ ಬಿಡುಗಡೆ ಮಾಡುತ್ತೇವೆ. ಅದರಲ್ಲಿ ಡಿ.ಕೆ.ಶಿವಕುಮಾರ್ ಬಗ್ಗೆ ಪ್ರಸ್ತಾಪಿಸಿರುವುದೂ ಇದೆ. ಸಿಡಿ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಪಾತ್ರವಿದೆ ಎಂದು ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಯುವತಿ ಸಹೋದರ, ಪ್ರಕರಣದಲ್ಲಿ ಡಿಕೆಶಿ ಕೈವಾಡ ಇಲ್ಲ ಎಂದು ಹೇಳುವುದಾದರೆ, ರಾಜ್ಯದಲ್ಲಿ ಹಲವು ರಾಜಕೀಯ ನಾಯಕರಿದ್ದಾರೆ. ಅವೆರೆಲ್ಲರನ್ನೂ ಬಿಟ್ಟು ನನ್ನ ಸಹೋದರಿ ಡಿ.ಕೆ.ಶಿವಕುಮಾರ್ ಹೆಸರನ್ನು ಮಾತ್ರ ಯಾಕೆ ಹೇಳುತ್ತಾಳೆ ಎಂದು ಪ್ರಶ್ನಿಸಿದ್ದಾರೆ.

ಈ ನಡುವೆ ಯುವತಿ ತಂದೆ ತಮ್ಮ ಮಗಳು ಒತ್ತಡದಲ್ಲಿದ್ದಾಳೆ. ಆಕೆ ನೀಡಿರುವ ಹೇಳಿಕೆಯನ್ನು ಪರಿಗಣಿಸಬಾರದು ಎಂದು ಕೋರ್ಟ್ ಮೊರೆ ಹೋಗಿರುವ ಘಟನೆ ನಡೆದಿದೆ.


Spread the love

About Laxminews 24x7

Check Also

ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ.: ಲಕ್ಷ್ಮೀ ಹೆಬ್ಬಾಳ್ಕರ್

Spread the love ಬೆಳಗಾವಿ: ರಾಜ್ಯದ ರಾಜಕಾರಣ, ದೇಶದ ರಾಜಕಾರಣ ತಲೆ ತಗ್ಗಿಸುವ ಘಟನೆಯಿದು. ನಾಗರಿಕ ಸಮಾಜ ತಲೆ ತಗ್ಗಿಸುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ