Breaking News
Home / ಜಿಲ್ಲೆ / ಸ್ಯಾಂಡಲ್‍ವುಡ್ ನಟಿ ಶರ್ಮಿಳಾ ಮಾಂಡ್ರೆ ಲಾಕ್‍ಡೌನ್ ಇದ್ದರೂ ಜಾಲಿ ರೈಡ್ ಮಾಡಿ ಅಪಘಾತ ಮಾಡಿದ್ದಾರೆ.

ಸ್ಯಾಂಡಲ್‍ವುಡ್ ನಟಿ ಶರ್ಮಿಳಾ ಮಾಂಡ್ರೆ ಲಾಕ್‍ಡೌನ್ ಇದ್ದರೂ ಜಾಲಿ ರೈಡ್ ಮಾಡಿ ಅಪಘಾತ ಮಾಡಿದ್ದಾರೆ.

Spread the love

ಬೆಂಗಳೂರು: ಕೊರೊನಾ ವೈರಸ್ ಭೀತಿಯಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಕೆಲ ನಟ-ನಟಿಯರು ಮನೆಯಲ್ಲಿ ಇರಿ, ಯಾರೂ ಹೊರಗೆ ಬರಬೇಡಿ ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ. ಆದರೆ ಈ ಮಧ್ಯೆ ಸ್ಯಾಂಡಲ್‍ವುಡ್ ನಟಿಯೊಬ್ಬರು ಲಾಕ್‍ಡೌನ್ ಇದ್ದರೂ ಜಾಲಿ ರೈಡ್ ಮಾಡಿ ಅಪಘಾತ ಮಾಡಿದ್ದಾರೆ.

ನಟಿ ಶರ್ಮಿಳಾ ಮಾಂಡ್ರೆ ಜಾಲಿ ರೈಡ್ ಮಾಡಲು ಹೋಗಿ ಅಪಘಾತ ಮಾಡಿದ್ದಾರೆ. ಇಂದು ನಸುಕಿನ ಜಾವ 3 ಗಂಟೆಗೆ ಈ ಘಟನೆ ನಡೆದಿದ್ದು, ಪ್ರಾಥಮಿಕ ತನಿಖೆಯಲ್ಲಿ ಇದು ಡ್ರಿಂಕ್ ಆ್ಯಂಡ್ ಡ್ರೈವ್ ಕೇಸ್ ಎಂದು ತಿಳಿದು ಬಂದಿದೆ.

ಶರ್ಮಿಳಾ ಮಾಂಡ್ರೆ ಜಾಗ್ವರ್ ಕಾರಿನಲ್ಲಿ ತನ್ನ ಸ್ನೇಹಿತರ ಜೊತೆ ರಾತ್ರಿ ಹೊತ್ತಲ್ಲಿ ಜಾಲಿ ರೈಡ್ ಹೋಗಿದ್ದರು. ಆದರೆ ವಸಂತನಗರ ಅಂಡರ್ ಪಾಸ್ ಪಿಲ್ಲರ್‌ಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಅಪಘಾತದಲ್ಲಿ ಶರ್ಮಿಳಾ ಮಾಂಡ್ರೆ ಮುಖಕ್ಕೆ ಗಾಯವಾಗಿದೆ. ಇನ್ನೂ ಕಾರಿನಲ್ಲಿ ಒಬ್ಬ ಸ್ನೇಹಿತನಿಗೆ ಕೈ ಫ್ರಾಕ್ಚರ್ ಆಗಿದ್ದು, ಇಬ್ಬರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಷ್ಟೇ ಅಲ್ಲದೇ ಅಪಘಾತ ಮಾಡಿದ ಮೇಲೆ ನಟಿ ಶರ್ಮಿಳಾ ಮಾಂಡ್ರೆ ಸೀನ್ ಕ್ರಿಯೇಟ್ ಮಾಡಿದ್ದು, ಅಪಘಾತ ಆಗಿದ್ದು ಜಯನಗರ, ಜೆಪಿನಗರ ಎಂದು ಹೇಳಿದ್ದಾರೆ. ಆದರೆ ಜಾಗ್ವರ್ ಕಾರನ್ನು ಯಾರು ಡ್ರೈವ್ ಮಾಡುತ್ತಿದ್ದರು ಎಂಬುದು ತಿಳಿದುಬಂದಿಲ್ಲ.

ಈ ಕುರಿತು ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಂಡರ್ ಪಾಸ್ ಪಿಲ್ಲರ್‌ಗೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ


Spread the love

About Laxminews 24x7

Check Also

ಬೆಂ.ಗ್ರಾದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್​​ ಹಂಚಿಕೆ ಆರೋಪ; BJP-JDS ಕಾರ್ಯಕರ್ತರ ಮೇಲೆ ಹಲ್ಲೆ!

Spread the love ರಾಮನಗರ: ಬೆಂಗಳೂರು ಗ್ರಾಮಾಂತರದ (Bengaluru Rural) ರಾಮನಗರದಲ್ಲಿ (Ramanagara) ಕಾಂಗ್ರೆಸ್ ಕಾರ್ಯಕರ್ತರು, ಡಿಸಿಎಂ ಡಿಕೆ ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ