Breaking News

ಡಿಕೆಶಿವಕುಮಾರ್ , ಸಿದ್ದರಾಮಯ್ಯ ಪ್ರಚಾರಕ್ಕೆ ಬರಲಿದ್ದಾರೆ : ಸತೀಶ್ ಜಾರಕಿಹೊಳಿ

Spread the love

ಬೆಳಗಾವಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಲೋಕಸಭಾ ಉಪಚುನಾವಣೆ ಪ್ರಚಾರಕ್ಕೆ ಬರುತ್ತಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಹೇಳಿದರು.

ಗೋಕಾಕದಲ್ಲಿ ಪ್ರಚಾರದ ವೇಳೆ ಮಾತನಾಡಿ, ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಚಾರಕ್ಕೆ ಬರಲಿದ್ದಾರೆ. ರಾಜಕೀಯದಲ್ಲಿ ಪರ ವಿರೋಧ ಇದ್ದೇ ಇರುತ್ತದೆ ಎಂದರು.

ಗೋಕಾಕ್, ಅರಭಾವಿ ಕ್ಷೇತ್ರ ಬಿಟ್ಟು ಬೇರೆ ಕಡೆ ಪ್ರಚಾರ ಮಾಡುವ ಕುರಿತು ಚರ್ಚೆ ಮಾಡುತ್ತೇನೆ. ಇನ್ನು ಸಿಡಿ ವಿಚಾರವನ್ನ ಉಪ ಚುನಾವಣೆಯ ಪ್ರಚಾರದಲ್ಲಿ ಪ್ರಸ್ತಾಪ ಮಾಡುತ್ತಿಲ್ಲ. ಕ್ಷೇತ್ರದಲ್ಲಿರುವ ಜಾರಕಿಹೋಳಿ ಅಭಿಮಾನಿಗಳು ನಮ್ಮ ಪರ ನಿಲ್ಲುತ್ತಾರೆ. ಬಿಜೆಪಿ ಆಡಳಿತದಿಂದ ಬೇಸತ್ತಿರುವ ಜನ ನನಗೆ ಮತ ಹಾಕುತ್ತಾರೆ ಎಂದರು.


Spread the love

About Laxminews 24x7

Check Also

ಡಿ.ಕೆ. ಶಿವಕುಮಾರ್ ಸಿಎಂ: ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಅದ್ಧೂರಿ ವಿಜಯೋತ್ಸವ

Spread the loveರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ಗಡಿನಾಡು ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ