Breaking News

ಸಿಎಂ ಬದಲಾವಣೆ, ಬಿಜೆಪಿಯಲ್ಲಿ ಭಾರಿ ಸ್ಫೋಟದ ಸುಳಿವು ನೀಡಿದ ಯತ್ನಾಳ್

Spread the love

ವಿಜಯಪುರ: ಮೇ 2 ರೊಳಗೆ ಮುಖ್ಯಮಂತ್ರಿ ಬದಲಾವಣೆಯಾಗದಿದ್ದರೆ ಬಿಜೆಪಿಯಲ್ಲಿ ಭಾರಿ ಸ್ಪೋಟವಾಗಲಿದೆ ಎಂದು ಪಕ್ಷದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಈಶ್ವರಪ್ಪ ಪಕ್ಷದ ಹಿರಿಯ ನಾಯಕರು. ರಾಜ್ಯಾಧ್ಯಕ್ಷರಾಗಿ ಅನುಭವ ಹೊಂದಿದವರು. ರಾಜ್ಯದಲ್ಲಿ ಬಿಜೆಪಿ ಕಟ್ಟುವಲ್ಲಿ ಈಶ್ವರಪ್ಪನವರ ಶ್ರಮ ಇದೆ ಎಂದು ಹೇಳಿದ್ದಾರೆ.

ಅಂಥವರು ಬೇಸತ್ತು ರಾಜ್ಯಪಾಲರಿಗೆ ದೂರು ನೀಡಿರುವುದು ತಪ್ಪಲ್ಲ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಮುಖ್ಯಮಂತ್ರಿಗೆ ಬುದ್ಧಿವಾದ ಹೇಳಬೇಕಿತ್ತು. ಅದನ್ನು ಬಿಟ್ಟು ಈಶ್ವರಪ್ಪನವರ ಬಗ್ಗೆ ಮಾತನಾಡಿರುವುದು ಸರಿಯಲ್ಲ. ಅರುಣ್ ಸಿಂಗ್ ಬಿಜೆಪಿ ಪರವಾಗಿದ್ದಾರೆಯೇ ಅಥವಾ ಮುಖ್ಯಮಂತ್ರಿ ಪರವಾಗಿದ್ದಾರೆಯೇ ಎಂದು ಯತ್ನಾಳ್ ಕೇಳಿದ್ದು, ಮೇ 2 ರೊಳಗೆ ಮುಖ್ಯಮಂತ್ರಿ ಬದಲಾವಣೆಯಾಗದಿದ್ದರೆ ಪಕ್ಷದಲ್ಲಿ ಭಾರಿ ಸ್ಪೋಟವಾಗಲಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ