Breaking News

ಕೊರೋನಾ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ : ಸಚಿವ ಸುಧಾಕರ್

Spread the love

ಬೆಂಗಳೂರು, ಏ.3- ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳನ್ನು ತಡೆಗಟ್ಟಬೇಕಾದ ಅಗತ್ಯವಿರುವ ಕಾರಣ ಸರ್ಕಾರದ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಂತ್ರಿಕ ಸಲಹಾ ಸಮಿತಿಯವರ ಶಿಫಾರಸಿನ ಮೇಲೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ಮಾಡಿ ಮಾರ್ಗಸೂಚಿಯನ್ನು ಜಾರಿ ಮಾಡಲಾಗಿದೆ. ಇದು ಏಕಾಏಕಿ ತೆಗೆದುಕೊಂಡ ನಿರ್ಧಾರವಲ್ಲ ಎಂದು ಹೇಳಿದರು.

ವೈಜ್ಞಾನಿಕ ವರದಿ ಆಧಾರದ ಮೇಲೆ ಕ್ರಮ ಕೈಗೊಂಡಿದ್ದೇವೆ. ಏಕಾಏಕಿ ಈ ನಿರ್ಧಾರ ತೆಗೆದುಕೊಂಡಿಲ್ಲ. ಸೋಂಕು ನಿಯಂತ್ರಣಕ್ಕೆ ಇದು ಅನಿವಾರ್ಯ ಎಂದು ಸರ್ಕಾರದ ಕ್ರಮವನ್ನು ಬಲವಾಗಿ ಸಮರ್ಥಿಕೊಂಡರು. ಕೊರೊನಾ ಎರಡನೆ ಅಲೆ ಹೊಸ್ತಿಲಲ್ಲಿದ್ದೇವೆ. ನಮ್ಮ ಸರ್ಕಾರಕ್ಕೆ ಯಾವ ಚಟುವಟಿಕೆಗಳನ್ನೂ ನಿಷೇಧ ಮಾಡಲು ತರ್ಕ ಇಲ್ಲ. ಕೋವಿಡ್ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳದ ನಮಗೆ ಬೇರೆ ದಾರಿ ಇಲ್ಲ ಎಂದು ತಿಳಿಸಿದರು.

ಸದ್ಯ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ನಾವು ಈ ಹಿಂದೆಯೇ ಜನರಿಗೆ ನಾವು ಎಚ್ಚರಿಕೆ ಕೊಡುತ್ತ ಬಂದಿದ್ದೆವು. ಸಿಎಂ ನಿನ್ನೆ ನಿರ್ಧಾರ ತೆಗೆದುಕೊಂಡಿದ್ದಾರೆ. ಇದನ್ನು ಪ್ರತಿಯೊಬ್ಬರೂ ಪಾಲನೆ ಮಾಡಬೇಕೆಂದು ಮನವಿ ಮಾಡಿದರು.

ರಾತ್ರಿ ಕಫ್ರ್ಯೂ, ವೀಕೆಂಡ್ ಲಾಕ್‍ಡೌನ್ ಬಗ್ಗೆ ಸದ್ಯಕ್ಕೆ ಏನನ್ನೂ ಹೇಳಲ್ಲ. ಸರ್ಕಾರ ಧಾರ್ಮಿಕ ಕ್ಷೇತ್ರಗಳಿಗೂ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಇದರಲ್ಲಿ ರಾಜಕೀಯ ಬೆರೆಸುವ ಅವಶ್ಯಕತೆ ಇಲ್ಲ ಎಂದು ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದರು.

ಸೋಂಕು ನಿಯಂತ್ರಣಕ್ಕೆ ಬಂದರೆ ಮತ್ತೆ ಎಲ್ಲದಕ್ಕೂ ಅವಕಾಶ ಮಾಡಿಕೊಡಲಾಗುವುದು. ಸೋಂಕು ತಡೆಗಟ್ಟಲು ಗುಂಪು ಸೇರುವುದನ್ನು ಕಡಿಮೆ ಮಾಡಿ, ಮಾಸï ಬಳಸುವುದರ ಜೊತೆಗೆ ದಯವಿಟ್ಟು 45 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಿರಿ ಎಂದು ಸುಧಾಕರ್ ಸಲಹೆ ಮಾಡಿದರು. ಕರ್ನಾಟಕ ರಾಜ್ಯ ಮೊದಲ ಸ್ಥಾನದಲ್ಲಿದ್ದಾಗ ಎಲ್ಲವನ್ನೂ ಅನ್‍ಲಾಕ್ ಮಾಡಿದ್ದೆವು. ಈಗ ಪ್ರತಿನಿತ್ಯ ಐದು ಸಾವಿರ ಪ್ರಕರಣಗಳು ಬರುತ್ತಿವೆ.

ಬೆಂಗಳೂರಿನಲ್ಲೇ ಮೂರು ಸಾವಿರ ಪ್ರಕರಣಗಳು ದಾಖಲಾಗಿವೆ. ನಾವು ಕಳೆದ ಬಾರಿ ಪೀಕ್ ಇದ್ದಾಗ ಒಟ್ಟಾರೆ ನಾಲ್ಕೂವರೆ ಸಾವಿರ ಇತ್ತು. ಈಗ 5 ಸಾವಿರಕ್ಕೆ ಬರುತ್ತಿದೆ. ಈಗ ತಾಂತ್ರಿಕ ಸಲಹಾ ಸಮಿತಿ ಜೂನ್ ಅಂತ್ಯದವರೆಗೂ ಇರಲಿದೆ ಎಂಬ ಹೇಳಿದೆ. ಈಗ ಕ್ರಮ ಕೈಗೊಳ್ಳದಿದ್ದರೆ ಹೆಚ್ಚು ಕಡಿಮೆ ಆಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ತಾಂತ್ರಿಕ ಸಲಹಾ ಸಮಿತಿ ವರದಿ ತರಿಸಿಕೊಂಡು, ಮಂತ್ರಿಗಳ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡಿ, ಕೆಲವು ಪ್ರಸ್ತಾವನೆ ತಂದಿದ್ದು, ಅದನ್ನು ಅಳವಡಿಸಿದ್ದೇವೆ ಎಂದರು. ಕೆಲವರು ಈ ಚಟುವಟಿಕೆಗಳು ಇರಬೇಕು ಎಂಬ ಬೇಡಿಕೆಯನ್ನು ಇಟ್ಟಿದ್ದಾರೆ. ಆದರೆ ಕೈ ಮೀರಿ ಹೋಗಬಾರದು ಎಂದು ನಿಯಮಗಳನ್ನು ತಂದಿದ್ದೇವೆ ಎಂದರು.

ಸಿನಿಮಾ ನೂರರಷ್ಟು ಬಿಡಬೇಕು ಎಂಬ ನಟ ಪುನೀತ್ ಮನವಿ ವಿಚಾರವಾಗಿ, ನಮಗೆ ವಲಯವಾರು ಎಲ್ಲರ ಬಗ್ಗೆ ಗೌರವ, ಅಭಿಮಾನ ಇದೆ. ಶಾಲೆ, ಜಿಮï, ಸ್ವಿಮ್ಮಿಂಗ್ ಪೂಲï, ಮದುವೆ, ಅಪಾರ್ಟ್‍ಮೆಂಟ್ ಎಲ್ಲವೂ ತೆಗೆದರೆ, ಏನು ಪ್ರಯೋಜನ ಎಂದು ಪ್ರಶ್ನಿಸಿದರು.

ಗಂಭೀರವಾದ ಕ್ರಮ ಕೈಗೊಂಡಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಹೀಗೇ ಬಿಟ್ಟರೆ ಕಷ್ಟವಾಗಲಿದೆ ಎಂಬ ಕಾರಣಕ್ಕಾಗಿ ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಚುನಾವಣೆಗೂ ಮಾರ್ಗಸೂಚಿ ಅನ್ವಯವಾಗಲಿದೆ. ಚುನಾವಣಾ ಆಯೋಗದಿಂದ ಮಾರ್ಗಸೂಚಿ ನೀಡಲಾಗಿದೆ ಎಂದು ಹೇಳಿದರು.


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ