ಬೆಳಗಾವಿ: ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಜಿಲ್ಲಾ ಅಧ್ಯಕ್ಷರಾಗಿ ಆರ್.ಅಭಿಲಾಷ್ ಅವರು ಅಧಿಕಾರ ಸ್ವೀಕರಿಸಿದರು.
ನಗರದ ಸಂಕಮ್ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ಅವರು ಆದೇಶ ಪತ್ರ ನೀಡಿ ಸನ್ಮಾನಿಸಿದರು. ಈ ವೇಳೆ ಮಾತನಾಡಿದ ಪ್ರವೀಣ್ ಕುಮಾರ್ ಶೆಟ್ಟಿ ಅವರು ಬೆಳಗಾವಿ ಜಿಲ್ಲೆಯಲ್ಲಿ ನಾಡ ವಿರೋಧಿ ಚಟುವಟಿಕೆಗಳಿಗೆ ಕಡಿವಾಣ ಹಾಕಲು ನಿರಂತರ ಸಮರ ಮಾಡುವುದಾಗಿ ತಿಳಿಸಿದರು.
ಇದೇ ವೇಳೆ ಮಾತನಾಡಿದ ನೂತನ ಜಿಲ್ಲಾ ಅಧ್ಯಕ್ಷರಾದ ಅಭಿಲಾಷ್ ಅವರು, ಬೆಳಗಾವಿ ಜಿಲ್ಲೆಯಲ್ಲಿ ಐಟಿ ಬಿಟಿ ಕಂಪನಿಗಳನ್ನು ತರಲು ನಿರಂತರ ಹೋರಾಟ ಮಾಡುವುದಾಗಿ ಶಪಥ ಮಾಡಿದರು.
Laxmi News 24×7