Breaking News

14 ವರ್ಷದ ಹುಡುಗಿಯ ಮೇಲೆ ಅತ್ಯಾಚಾರ; ಆಸ್ಪತ್ರೆಯ ಎದುರು ಆಂಬುಲೆನ್ಸ್ ನಲ್ಲಿ ಶವಪತ್ತೆ

Spread the love

ಉತ್ತರಪ್ರದೇಶ: ಉತ್ತರಪ್ರದೇಶದ ನೋಯ್ಡಾದ ಖಾಸಗಿ ಆಸ್ಪತ್ರೆಯ ಹೊರಗಡೆ ನಿಂತಿದ್ದ ಆಂಬುಲೆನ್ಸ್ ನಲ್ಲಿ 14 ವರ್ಷದ ಹುಡುಗಿಯ ಶವ ಪತ್ತೆಯಾಗಿದೆ.

ಅಧಿಕಾರಿಗಳ ಪ್ರಕಾರ ಹುಡುಗಿಯನ್ನು ಅಪಹರಿಸಿ ನೋಯ್ಡಾದ ಖಾಸಗಿ ಆಸ್ಪತ್ರೆಯ ಬಳಿ ಕರೆತಂದು ಕೃತ್ಯ ಎಸಗಿದ್ದಾರೆ. ತಮ್ಮ ಕಾರ್ಯ ಮುಗಿದ ನಂತರ ಹುಡುಗಿಯನ್ನು ವಾಹನದಲ್ಲಿ ಬಿಟ್ಟು ಹೋಗಿದ್ದಾರೆ. ಇದನ್ನು ಕಂಡ ಆಸ್ಪತ್ರೆಯ ಸಿಬ್ಬಂದಿಗಳು ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಬಾಲಕಿ ಮೃತ ಪಟ್ಟಿದಾಳೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ ಎಂದು ಪೊಲೀಸ್ ಉಪ ಆಯುಕ್ತ, ರಣವಿಜಯ್ ಸಿಂಗ್ ತಿಳಿಸಿದ್ದಾರೆ.

ಹುಡುಗಿಯನ್ನು ಆಸ್ಪತ್ರೆಯಲ್ಲಿ ಬಿಟ್ಟುಹೋದ ಜನರನ್ನು ಪತ್ತೆಹಚ್ಚಲು ಆಸ್ಪತ್ರೆ ಮತ್ತು ಸ್ಥಳೀಯ ಪ್ರದೇಶದ ಸಿ.ಸಿ.ಟಿ.ವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಯಿತು. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ