ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಎಸ್. ಸಾಹು ಕಾರ್ ಅವರನ್ನು ನೇಮಕ ಮಾಡಲಾಗಿದೆ.
ಆಯೋಗದ ಸದಸ್ಯರಾಗಿದ್ದ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಅಧ್ಯಕ್ಷರನ್ನಾಗಿ ರಾಜ್ಯಪಾಲ ವಜುಭಾಯಿ ವಾಲಾ ನೇಮಕ ಮಾಡಿದ್ದಾರೆ.
ರಾಜ್ಯಪಾಲರ ಆದೇಶವನ್ನು ಪ್ರಕಟಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಎ. 3ರಂದು ಅಧಿಸೂಚನೆ ಹೊರಡಿಸಿದೆ.
ನೂತನ ಅಧ್ಯಕ್ಷರು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನವರು. ರಾಯಚೂರಿನ ಕೃಷಿ ವಿವಿಯಲ್ಲಿ ಕೃಷಿ ಎಂಜಿನಿಯರಿಂಗ್ ಪದವಿ ಪಡೆದ ಬಳಿಕ 12 ವರ್ಷಗಳ ಕಾಲ ಸಲಹೆಗಾರರಾಗಿ ಕೆಲಸ ಮಾಡಿದ್ದಾರೆ
Laxmi News 24×7