Breaking News

2.10 ಲಕ್ಷ ಮೌಲ್ಯದ ಗಾಂಜಾ ವಶ: ಇಬ್ಬರ ಬಂಧನ

Spread the love

ದಾವಣಗೆರೆ: ಇಲ್ಲಿನ ಬಾಡ ಕ್ರಾಸ್ ಬಳಿಯ ಚಿಂದೋಡಿ ಲೀಲಾ ರಂಗಲೋಕದ ಹಿಂಭಾಗದ ರಾಷ್ಟ್ರೀಯ ಹೆದ್ದಾರಿ-4ರ ಸರ್ವೀಸ್ ರಸ್ತೆಯ ಪಕ್ಕದ ಮಣ್ಣಿನ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಸಿಇಎನ್ ಠಾಣೆಯ ಪೊಲೀಸರು, 8 ಕೆ.ಜಿ 600 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಛತ್ತೀಸಗಡ ರಾಜ್ಯದ ರಾಯಗಡ ಜಿಲ್ಲೆಯ ಅಂತರಾಮ್ ತಿರ್ಕಿ (21) ಹಾಗೂ ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ಬಂಡೆಬಸಾಪುರ ಗ್ರಾಮದ ಮಧುರಾಜ್ (40) ಬಂಧಿತರು. ಇವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಗಳಿಂದ ₹2.10 ಲಕ್ಷ ಮೌಲ್ಯದ ಗಾಂಜಾ, ಒಂದು ಮೊಬೈಲ್ ಹಾಗೂ ₹ 900 ವಶಪಡಿಸಿಕೊಳ್ಳಲಾಗಿದೆ. ಮತ್ತೊಬ್ಬ ಆರೋಪಿ ಅನಿಲ್ ಜೇಕಬ್‌ನನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.

ಮಾಹಿತಿಯ ಮೇರೆಗೆ ಡಿಎಸ್‌ಆರ್‌ಬಿ ಡಿವೈಎಸ್‌ಪಿ ಬಿ.ಎಸ್. ಬಸವರಾಜ್‌ ನೇತೃತ್ವದಲ್ಲಿ ದಾಳಿ ನಡೆದಿದ್ದು, ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಪಿಎಸ್‌ಐ ಗಿರೀಶ್‌ ಬಿ.ವಿ ಹಾಗೂ ಕಾನ್‌ಸ್ಟೆಬಲ್‌ಗಳಾದ ಲೋಹಿತ್, ಮಲ್ಲಿಕಾರ್ಜುನ, ಗೋವಿಂದ್ ರಾಜ್, ಕೊಟ್ರೇಶ್, ನಾಗರಾಜ್, ದ್ಯಾಮೇಶ್ ದಾಳಿಯಲ್ಲಿ ಪಾಲ್ಗೊಂಡಿದ್ದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಎಎಸ್‌ಪಿ ಎಂ.ರಾಜೀವ್ ಅವರು ತಂಡವನ್ನು ಶ್ಲಾಘಿಸಿ ಬಹುಮಾನ ಘೋಷಿಸಿದ್ದಾರೆ.


Spread the love

About Laxminews 24x7

Check Also

ಪತಿಗೆ ಹೊಡೆದು ಶೌಚಾಲಯ ಗುಂಡಿಗೆ ಹಾಕಿದ್ದ ಪತ್ನಿ

Spread the loveಚಾಮರಾಜನಗರ: ಪ್ರಿಯಕರನ ಜೊತೆ ಸೇರಿ ತನ್ನ ಪತಿಗೆ ಹೊಡೆದು ಶೌಚಾಲಯ ಗುಂಡಿಗೆ ಹಾಕಿದ್ದ ಪತ್ನಿ ಹಾಗೂ ವ್ಯಕ್ತಿಗೆ ಅಪರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ