Breaking News

ನ್ಯಾಯಾಧೀಶರು ಸಿಟ್ಟಾಗಿದ್ದು ಕುಮಾರಸ್ವಾಮಿ ವಿರುದ್ಧ ಬಂಧನ ವಾರಂಟ್ ಹೊರಡಿಸುವುದಾಗಿ ಎಚ್ಚರಿಕೆ

Spread the love

ರಾಮನಗರ: ನ್ಯಾಯಾಲಯದ ಎಚ್ಚರಿಕೆ ನಡುವೆಯೂ ಮಾಜಿ ಮುಖ್ಯಮಂತ್ರಿ ಎಚ್.ಡಿ.‌ಕುಮಾರಸ್ವಾಮಿ ಭಾನುವಾರ ರಾತ್ರಿ‌ ನಗರದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾದರು.

ಕೆಲವು ದಿನಗಳ ಹಿಂದಷ್ಟೇ ಕುಮಾರಸ್ವಾಮಿ ಬೆಂಗಳೂರಿನ ನ್ಯಾಯಾಲಯವೊಂದರಲ್ಲಿ ಪ್ರಕರಣವೊಂದರ ವಿಚಾರಣೆಗೆ ಗೈರಾಗಿದ್ದರು. ಎಚ್.ಡಿ. ದೇವೇಗೌಡರಿಗೆ ಕೋವಿಡ್ ಸೋಂಕು ತಗುಲಿದ ಕಾರಣ ಕುಮಾರಸ್ವಾಮಿ ಕ್ವಾರಂಟೈನ್ ಆಗಿದ್ದು, ಈ ಹಿನ್ನೆಲೆಯಲ್ಲಿ ಅವರು‌ ನ್ಯಾಯಾಲಯಕ್ಕೆ ಬಂದಿಲ್ಲ ಎಂದು ಎಚ್ ಡಿಕೆ ಪರ ವಕೀಲರು‌ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದರು.

 

ಇದಕ್ಕೆ ನ್ಯಾಯಾಧೀಶರು ಸಿಟ್ಟಾಗಿದ್ದು, ಇದೇ 17ರವರೆಗೆ ಯಾವುದೇ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿ ಆದಲ್ಲಿ ಅವರ ವಿರುದ್ಧ ಬಂಧನ ವಾರಂಟ್ ಹೊರಡಿಸುವುದಾಗಿ ಎಚ್ಚರಿಕೆ ನೀಡಿದ್ದರು.


Spread the love

About Laxminews 24x7

Check Also

ಮೃತದೇಹಗಳನ್ನು ಗುರುತಿಸುತ್ತಿರುವ ಸಚಿವ ಸಂತೋಷ್​ ಲಾಡ್‌

Spread the loveಧಾರವಾಡ/ಬೆಂಗಳೂರು: ಜಮ್ಮು ಕಾಶ್ಮೀರ ಪಹಲ್ಗಾಮ್​ನಲ್ಲಿ ಮಂಗಳವಾರ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಗುರುತು ಪತ್ತೆ ನಡೆಯುತ್ತಿದ್ದು, ಕಾರ್ಮಿಕ ಸಚಿವ ಸಂತೋಷ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ