ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿ ಆಗಬಹುದು ಎಂದು ಮಾಜಿ ಸಭಾಧ್ಯಕ್ಷ ರಮೇಶ್ ಕುಮಾರ್ ತಿಳಿಸಿದ್ದಾರೆ.
ಸಿದ್ದರಾಮಯ್ಯ ಅವರನ್ನು ಮಾಜಿ ಮುಖ್ಯಮಂತ್ರಿ ಎನ್ನಬೇಡಿ. ಅವರು ಮಂತ್ರಿಯಾಗಿದ್ದಾಗ ಮಾಡಬೇಕಾದ ಸಾಧನೆ ಮಾಡಿದ್ದಾರೆ. ಜನರಿಗೆ ಇಷ್ಟವಿದ್ದರೆ ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತಾರೆ. ಮಾಜಿ ಮುಖ್ಯಮಂತ್ರಿ ಎಂದರೆ ಅದನ್ನು ಉಪ್ಪಿನಕಾಯಿ ಹಾಕಬೇಕೆ? ಎಂದಿದ್ದಾರೆ.
ಡಾ.ರಾಮನೋಹರ ಲೋಹಿಯಾ ಸಮತಾ ವಿದ್ಯಾಲಯ ಹಾಗೂ ಕನಾಟಕ ಗಾಂಧಿ ಸ್ಮಾರಕ ನಿಧಿ ಆಯೋಜಿಸಿದ್ದ ಪುಸ್ತಕವೊಂದರ ಲೋಕಾರ್ಪಣೆ ಕಾಯಕ್ರಮದಲ್ಲಿ ಆಯೋಜಕರು ಸಿದ್ದರಾಮಯ್ಯ ಅವರನ್ನು ‘ಮಾಜಿ ಮುಖ್ಯಮಂತ್ರಿ’ ಎಂದು ಸಂಬೋಧಿಸುತ್ತಿದ್ದರು. ತಮ್ಮ ಭಾಷಣದ ಸರತಿ ಬಂದಾಗ ರಮೇಶ್ ಕುಮಾರ್ ಈ ಮೇಲಿನಂತೆ ಮಾತನಾಡಿದ್ದಾರೆ.
Laxmi News 24×7