Breaking News

ಸಿಡಿ ಯುವತಿ ತಂದೆಯ ಅರ್ಜಿ ವಿಚಾರಣೆ ಮುಂದೂಡಿಕೆ

Spread the love

ಬೆಂಗಳೂರು: ಮಗಳ ಹೇಳಿಕೆ ಪರಿಗಣಿಸದಂತೆ ಸಿಡಿ ಯುವತಿ ತಂದೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

ನನ್ನ ಮಗಳ ಹೇಳಿಕೆ ಪರಿಗಣಿಸಬೇಡಿ ಎಂದು 164 ಅನ್ನು ರದ್ದು ಮಾಡುವಂತೆ ಸಿಡಿ ಯುವತಿ ತಂದೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕ ಸದಸ್ಯ ಪೀಠ ನಡೆಸಿದೆ.ಸಿಆರ್ ಪಿಸಿ ಸೆ. 164 ಹೇಳಿಕೆ ಕೋರ್ಟ್ ನಲ್ಲಿದೆ, ಆರೋಪಪಟ್ಟಿ ಸಲ್ಲಿಕೆಯಾಗುವವರೆಗೆ ಹೇಳಿಕೆಯ ಪ್ರತಿ ಸಿಗುವುದಿಲ್ಲ. ಹೀಗಾಗಿ ಹೇಳಿಕೆ ಹಾಜರುಪಡಿಸಲು ವಿನಾಯಿತಿ ನೀಡುವಂತೆ ಯುವತಿ ಪರ ವಕೀಲರು ಹೈಕೋರ್ಟ್ ಗೆ ಮನವಿ ಮಾಡಿದರು. ಹೀಗಾಗಿ ಹೈಕೋರ್ಟ್ ತಾತ್ಕಾಲಿಕ ವಿನಾಯಿತಿ ನೀಡಿದ್ದು, ರಾಜ್ಯ ಸರ್ಕಾರ, ಎಸ್‍ಐಟಿ, ಕಬ್ಬನ್ ಪಾರ್ಕ್ ಪೊಲೀಸರಿಗೆ ನೋಟಿಸ್ ನೀಡಿ ವಿಚಾರಣೆ ಮುಂದೂಡಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ