Breaking News

ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ ‘ಸೇವೆ ಖಾಯಂ

Spread the love

ಕುಷ್ಟಗಿ : ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವಂತ ನೌಕರರ ಸೇವೆಯನ್ನು ಹೊಸ ಹುದ್ದೆಗಳನ್ನು ಸೃಷ್ಠಿಸುವ ಮೂಲಕ ಖಾಯಂಗೊಳಿಸಲಾಗುವುದು ಎಂಬುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಈ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದ್ದಾರೆ.

 

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರ ಹುದ್ದೆಗಳಿಗೆ ಸಂಬಂಧಿಸಿದ ಹುದ್ದೆಗಳು ಇಲ್ಲದ ಕಾರಣ, ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಯನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗುತ್ತಿದೆ. ಬಹಳ ವರ್ಷಗಳಿಂದ ಇಂತಹ ಗುತ್ತಿಗೆ ನೌಕರರಿಗೆ ಆರ್ಥಿಕ ಸಮಸ್ಯೆಯ ನಡುವೆಯೂ ಇಲಾಖೆಯಿಂದ ಸಂಬಳ ನೀಡುತ್ತ ಬರಲಾಗಿದೆ ಎಂದರು.

ಕೆಲ ಸಮಸ್ಯೆಗಳಿಂದಾಗಿ ತಡೆಹಿಡಿಯಲಾಗಿದ್ದ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸುವಂತೆ 2 ದಿನಗಳ ಹಿಂದಷ್ಟೇ ಇಲಾಖೆಯ ಅಧಿಕಾರಿಗಳಿಗೆ ಆದೇಶಿಸಲಾಗಿದೆ. ಈ ಬಗ್ಗೆ ಕೆಲವೇ ದಿನಗಳಲ್ಲಿ ಸ್ಪಷ್ಟ ನಿರ್ಧಾರ ಹೊರಬೀಳಲಿದೆ. ಹೊಸ ಹುದ್ದೆಗಳು ಸೃಷ್ಠಿಯಾದರೂ ಸದ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ತೊಂದರೆಯಾಗುವುದಿಲ್ಲ. ನೇಮಕಾತಿ ಮೂಲಕ ಅವರನ್ನೇ ಕೆಲಸದಲ್ಲಿ ಮುಂದುವರೆಸುವ ಸಂಬಂಧ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ತಿಳಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ