Breaking News

ಯುವತಿಗೆ ತಾಳಿ ಕಟ್ಟಲು ಪ್ರಯತ್ನ ವಿರೋದಿಸಿದಕ್ಕೆ “ಬರ್ಬರ ಹತ್ಯೆ”…!

Spread the love

ತುಮಕೂರು : ತನ್ನ ಪ್ರೀತಿಯನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಯುವಕನೊಬ್ಬ ಆಕ್ರೋಶಗೊಂಡು ಯುವತಿಗೆ ಚಾಕು ಇರಿದ ಪರಿಣಾಮ ಯುವತಿಯೊಬ್ಬಳು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.

ತುಮಕೂರು ಜಿಲ್ಲೆ ಶಿರಾ ತಾಲೂಕಿನ ದೊಡ್ಡಗುಳ್ಳ ಗ್ರಾಮದ ಈರಣ್ಣ ಎಂಬಾತ ತನ್ನದೇ ಊರಿನ ಯುವತಿಯನ್ನು ಪ್ರೀತಿಸುತ್ತಿದ್ದ,ದಿನಂಪ್ರತಿ ನನ್ನನ್ನು ಪ್ರೀತಿಸು ಅಂತಾ ಹಿಂದೆ ಬಿದ್ದಿದ್ದ ಆದ್ರೆ ಯುವತಿಯ ಈರಣ್ಣ ನ ಪ್ರೀತಿಯನ್ನು ನಿರಾಕರಿಸಿದ್ದಳು.

ಹೀಗಾಗಿ ಯುವತಿ ಕಾಲೇಜಿಗೆ ಹೋಗುವಾಗ ಆಕೆಗೆ ತಾಳಿಯನ್ನು ಕಟ್ಟಲು ಪ್ರಯತ್ನ ಮಾಡಿದ್ದ ಆದ್ರೆ ಇದಕ್ಕೆ ನಿರಾಕರಿಸಿದ ಕಾರಣಕ್ಕೆ ಯುವತಿಗೆ ಹರಿತವಾದ ಆಯುಧದಿಂದ ಇರಿದು ಪರಾರಿಯಾಗಿದ್ದು ವಿಪರೀತ ರಕ್ತಸಾವ್ರದಿಂದ ಯುವತಿ ಸ್ಥಳದಲ್ಲೇ ಸಾವನಪ್ಪಿದ್ದಾಳೆ.

ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿಯನ್ನು ನೀಡಿದ್ದು ತಲೆ ಮರೆಸಿಕೊಂಡಿರುವ ಆರೋಪಿಯನ್ನು ಹಿಡಿಯಲು ಬಲೆ ಬಿಸಿದ್ದಾರೆ,ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ