Breaking News

‘ಭಾರತ ನಿಮ್ಮನ್ನು ಎಣಿಕೆ ಮಾಡುತ್ತಿದೆ’ : ಮತದಾನ ಮಾಡಲು ರಾಹುಲ್, ಪ್ರಿಯಾಂಕಾ ಮನವಿ

Spread the love

ನವದೆಹಲಿ,ಏ.6- ಭಾರತ ನಿಮ್ಮನ್ನು ಎಣಿಕೆ ಮಾಡುತ್ತಿದೆ ಹೀಗಾಗಿ ನಿಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಿ ಎಂದು ವಿಧಾನಸಭಾ ಚುನಾವವಣೆ ನಡೆಯುತ್ತಿರುವ ರಾಜ್ಯಗಳ ಮತದಾರರಿಗೆ ರಾಹುಲ್‍ಗಾಂಧಿ ಮನವಿ ಮಾಡಿಕೊಂಡಿದ್ದಾರೆ. ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಹಾಗೂ ಪುದುಚೇರಿ ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿರುವ ಸಂದರ್ಭದಲ್ಲಿ ರಾಹುಲ್ ಈ ರೀತಿಯ ಟ್ವೀಟ್ ಮಾಡಿದ್ದಾರೆ.

ಇಂದು ನೀವು ಮತದಾನ ಮಾಡಿದರೆ ಮುಂದೆ ದೇಶ ಮುಂದೆ ನಿಮ್ಮನ್ನು ಎಣಿಕೆ ಮಾಡಲಿದೆ ಎಂದು ಅವರು ಮಾಡಿರುವ ಟ್ವೀಟ್ ಗಮನ ಸೆಳೆದಿದೆ. ವಿಧಾನಸಭಾ ಚುನಾವಣೆ ನಡೆಯುತ್ತಿರುವ ರಾಜ್ಯಗಳಲ್ಲಿರುವ ನನ್ನ ಸಹೋದರ ಸಹೋದರಿಯರು ಮನೆಯಿಂದ ಹೊರಬಂದು ನಿರ್ಭೀತಿಯಿಂದ ಮತ ಚಲಾಯಿಸುವಂತೆ ಪ್ರಿಯಾಂಕಾ ಗಾಂಧಿ ಅವರು ಮನವಿ ಮಾಡಿಕೊಂಡಿದ್ದಾರೆ.ನೀವು ನಿಮ್ಮ ಪ್ರಜಾಪ್ರಭುತ್ವದ ಹಕ್ಕು ಚಲಾಯಿಸಲು ಇದು ಸೂಕ್ತ ಸಮಯ. ಎಲ್ಲರೂ ಮತದಾನ ಮಾಡುವ ಮೂಲಕ ಭವ್ಯ ಭಾರತಕ್ಕೆ ಮನ್ನುಡಿ ಬರೆಯಿರಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.


Spread the love

About Laxminews 24x7

Check Also

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹಾರಾಟ ಕಡಿಮೆ: ರಾಜ್ಯಸಭೆಯಲ್ಲಿ ಸಂಸದ ಈರಣ್ಣ ಕಡಾಡಿ ಆಕ್ರೋಶ

Spread the loveನವದೆಹಲಿ: ಕರ್ನಾಟಕದ ಎರಡನೇ ರಾಜಧಾನಿ ಎಂದೇ ಖ್ಯಾತವಾದ ಬೆಳಗಾವಿ  ನಗರವು ಶಿಕ್ಷಣ, ಉದ್ಯಮ ಹಾಗೂ ರಕ್ಷಣಾ ಕ್ಷೇತ್ರಗಳಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ