Breaking News

ಜನತೆಗೆ ತಟ್ಟಿದ ಸಾರಿಗೆ ಮುಷ್ಕರ ಬಿಸಿ, ಖಾಸಗಿ ವಾಹನಗಳಿಂದ ಸುಲಿಗೆ -ಪ್ರಯಾಣಿಕರ ಪರದಾಟ

Spread the love

ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರರು ಮುಷ್ಕರ ಕೈಗೊಂಡಿದ್ದು, ರಾಜ್ಯದ ಜನತೆಗೆ ಮುಷ್ಕರದ ಬಿಸಿ ತಟ್ಟಿದ್ದು ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ.

ಈ ನಡುವೆ ಖಾಸಗಿ ಬಸ್ ಗಳಲ್ಲಿ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎನ್ನುವ ದೂರುಗಳು ಕೇಳಿಬಂದಿವೆ. ಮುಷ್ಕರ ಆರಂಭವಾಗುತ್ತಿದ್ದಂತೆ ಡೀಸೆಲ್ ದರ 80 ರ ರೂಪಾಯಿ ಇದೆ ಎಂದು ಹೇಳುತ್ತಿರುವ ಖಾಸಗಿ ಬಸ್ ಗಳಲ್ಲಿ ಹೆಚ್ಚಿನ ಪ್ರಯಾಣ ದರ ವಸೂಲಿ ಮಾಡಲಾಗುತ್ತಿದೆ. ಸಾರಿಗೆ ಇಲಾಖೆ ಬದಲಿ ವಾಹನಗಳ ವ್ಯವಸ್ಥೆ ಮಾಡಲಾಗಿದ್ದು, ಹೆಚ್ಚುವರಿ ದರ ಇಲ್ಲದೆ ನಿಗದಿತ ದರದಲ್ಲಿ ಪ್ರಯಾಣಿಸಬಹುದು ಎಂದು ಹೇಳಿದೆ. ಆದರೆ, ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.


Spread the love

About Laxminews 24x7

Check Also

ಅನ್ನಭಾಗ್ಯ ಆಹಾರ ಧಾನ್ಯ ಸಾಗಾಟ ಬಂದ್: ಸಾಗಾಣಿಕೆ ವೆಚ್ಚ 250 ಕೋಟಿ ರೂ. ಬಾಕಿ ಕೊಡದ ಸರ್ಕಾರ

Spread the loveಬೆಂಗಳೂರು, ಜುಲೈ 7: ಅನ್ನಭಾಗ್ಯ (Anna Bhagya) ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದು. ಅನ್ನಭಾಗ್ಯ ಯೋಜನೆಗೆ 10 ಕೆಜಿ ಅಕ್ಕಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ