: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಮುಂಜಾನೆಯಿಂದ ಮುಷ್ಕರ ಆರಂಭಸಿದ್ದಾರೆ. ರಾಜ್ಯಾದ್ಯಂತ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಪ್ರಾಯಾಣಿಕರು ವಿದ್ಯಾರ್ಥಿಗಳು, ರೋಗಿಗಳು ಬಸ್ ಗಳಿಲ್ಲದೇ ಪರದಾಡುತ್ತಿದ್ದಾರೆ.

ಮುಷ್ಕರ ನಿರ್ಧಾರ ಕೈಬಿಡುವಂತೆ ಸರ್ಕಾರ ಹಲವು ಬಾರಿ ಮನವಿ ಮಾಡಿದರೂ ಬಗ್ಗದ ಸಾರಿಗೆ ನೌಕರರು ಬೇಡಿಕೆ ಈಡೇರಿಕೆಗೆ ಪಟ್ಟು ಹಿಡಿದಿದ್ದಾರೆ. ಇದರಿಂದ ಸರ್ಕಾರ ಸಾರಿಗೆ ನೌಕರರಿಗೆ ಬಿಗ್ ಶಾಕ್ ನೀಡಿದೆ. ಸಾರಿಗೆ ನೌಕರರ ಮಾರ್ಚ್ ತಿಂಗಳ ವೇತನ ತಡೆ ಹಿಡಿಯಲು ಸರ್ಕಾರ ಮುಂದಾಗಿದೆ.
ಮಾರ್ಚ್ ತಿಂಗಳ ವೇತನವನ್ನು ತಡೆ ಹಿಡಿಯುವಂತೆ ರಾಜ್ಯ ಸರ್ಕಾರ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಿಗೂ ಆದೇಶ ನೀಡಿದೆ ಎಂದು ತಿಳಿದುಬಂದಿದೆ.
Laxmi News 24×7