Breaking News

ಜನವಿರೋಧಿ ಆಡಳಿತದಿಂದಾಗಿ ಎಲ್ಲೆಡೆ ಬಿಜೆಪಿ ವಿರೋಧಿ ಅಲೆ : ಸತೀಶ್ ಜಾರಕಿಹೊಳಿ ಗೆಲುವು ಖಚಿತ ಎಂದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

Spread the love

ಬೆಳಗಾವಿ – ಜನವಿರೋಧಿ ಆಡಳಿತದಿಂದಾಗಿ ಎಲ್ಲೆಡೆ ಬಿಜೆಪಿ ವಿರೋಧಿ ಅಲೆ ಎದ್ದಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಗೆಲುವು ಖಚಿತ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ.
​ಅತವಾಡ, ಗೋಜಗಾ, ಬೆಕ್ಕಿನಕೇರಿ, ಗಣೇಶಪುರದ ಜ್ಯೋತಿ ನಗರದಲ್ಲಿ ಲೋಕಸಭಾ ಉಪ ಚುನಾವಣೆಯ ಪ್ರಯುಕ್ತ  ಸತೀಶ್ ಜಾರಕಿಹೊಳಿಯವರ ಪರ ಮತ ಯಾಚಿಸಿ ಅವರು ಮಾತನಾಡುತ್ತಿದ್ದರು.
​ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸರಕಾರಕ್ಕೆ ಬಡ ಜನರ ಬಗೆಗೆ ಸ್ವಲ್ಪವೂ ಕನಿಕರವಿಲ್ಲ. ನಿತ್ಯ ಬಳಕೆ ವಸ್ತುಗಳು ಸೇರಿದಂತೆ ಎಲ್ಲವುಗಳ ಬೆಲೆ ಏರಿಕೆಯಾಗಿದೆ. ಜನರು ಒಂದು ಹೊತ್ತಿನ ಗಂಜಿಗಾಗಿ ಕಣ್ಣೀರು ಸುರಿಸುತ್ತಿದ್ದರೂ ಬಿಜೆಪಿಯವರಿಗೆ ಕಾಣಿಸುತ್ತಿಲ್ಲ. ಇಂತಹ ಸರಕಾರವನ್ನು ಆದಷ್ಟು ಶೀಘ್ರ ಕಿತ್ತೆಸೆಯಲು ಜನರು ಕಾಯುತ್ತಿದ್ದಾರೆ ಎಂದು ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.
ಸತೀಶ್ ಜಾರಕಿಹೊಳಿ ಅವಿಶ್ರಾಂತ ಕೆಲಸಗಾರರು. ರಾಜ್ಯದಲ್ಲಿ ಅತ್ಯಂತ ಪ್ರಭಾವಿ ನಾಯಕರು. ಅವರನ್ನು ಲೋಕಸಭೆಗೆ ಆರಿಸಿ ಕಳಿಸಿದರೆ ಜಿಲ್ಲೆಯ ಸಮಗ್ರ ಅಭಿವೃದ್ಧಿ ಖಚಿತ. ಹಾಗಾಗಿ ಅವರಿಗೆ ಮತ ನೀಡಿ ಅತ್ಯಧಿಕ ಮತಗಳಿಂದ ಆಯ್ಕೆ ಮಾಡೋಣ ಎಂದು ಅವರು ಹೇಳಿದರು.

Spread the love

About Laxminews 24x7

Check Also

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ

Spread the loveಬೆಂಗಳೂರು: ರಾಮ ಮಂದಿರ ದೇಣಿಗೆ ಹಗರಣವನ್ನು ಬಿಜೆಪಿ ಮುಚ್ಚಿ ಹಾಕೋಕೆ ಪ್ರಯತ್ನ ಮಾಡ್ತಿದೆ ಅಂತ ಗೃಹ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ