Breaking News

6ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೊಳಿಸಲೂ ಸಾಧ್ಯವೇ ಇಲ್ಲ – ಬಿಎಸ್ ವೈ

Spread the love

ಬೆಳಗಾವಿ : ಇಂದಿನಿಂದ ರಾಜ್ಯಾದ್ಯಂತ ಸಾರಿಗೆ ನೌಕರರು 6ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೊಳಿಸುವ ಜೊತೆಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದಾರೆ.

ಆದ್ರೆ ಮುಷ್ಕರದ ಹಿಂದಿನ ದಿನವೂ ಬೆಳವಾಗಿಯಲ್ಲಿ ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ್ದ ಸಿಎಂ ಬಿಎಸ್ ಯಡಿಯೂರಪ್ಪನವರು ಯಾವುದೇ ಕಾರಣಕ್ಕೂ 6ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಸಾರಿಗೆ ನೌಕರರ 9 ಬೇಡಿಕೆಯಲ್ಲಿ 8 ಬೇಡಿಕೆಗಳನ್ನ ಈಡೇರಿಸಿದ್ದೇವೆ. ಕೊವಿಡ್‌ನಿಂದ ಎದುರಾದ ಆರ್ಥಿಕ ಸಂಕಷ್ಟದ ನಡುವೆಯೂ ವೇತನ ನೀಡಿದ್ದೇವೆ. ಸರ್ಕಾರದಿಂದಲೇ 1200 ಕೋಟಿ ರೂ. ಸಂಬಳ ಸಾರಿಗೆ ಇಲಾಖೆಗೆ ಕೊಟ್ಟಿದ್ದೇವೆ.

ರಾಜ್ಯದಲ್ಲಿ 6ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೊಳಿಸುವ ಪ್ರಶ್ನೆಯೇ ಇಲ್ಲ. 8% ವೇತನ ಹೆಚ್ಚಳಕ್ಕೆ ಯೋಚನೆ ಮಾಡುತ್ತಿದ್ದೇವೆ. ದುರುದ್ದೇಶದಿಂದ ಉದ್ದೇಶಪೂರ್ವಕವಾಗಿ ಸತ್ಯಾಗ್ರಹ ಮಾಡಿಸಲಾಗುತ್ತಿದೆ. ನಮ್ಮ ಮಾತಿಗೆ ಬೆಲೆ ಕೊಟ್ಟು ಮುಷ್ಕರ ವಾಪಸ್ ಪಡೆಯುತ್ತಾರಾ ಎಂಬುದನ್ನು ಕಾದುನೋಡಬೇಕಿದೆ ಎಂದಿದ್ದರು. ಆದ್ರೆ ಸಾರಿಗೆ ನೌಕರರು ಇದ್ಯಾವುದಕ್ಕೂ ಕೇರ್ ಮಾಡದೇ ಇಂದು ರಾಜ್ಯಾದ್ಯಂತೆ ಪ್ರತಿಭಟನೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ