Breaking News

BIG NEWS: 1 ರಿಂದ 9 ನೇ ತರಗತಿಗೆ ಪರೀಕ್ಷೆ ಇಲ್ಲದೆ ಪಾಸ್: ಮಹಾರಾಷ್ಟ್ರ ರೀತಿ ರಾಜ್ಯದಲ್ಲೂ ತೀರ್ಮಾನ ಸಾಧ್ಯತೆ

Spread the love

ಮಹಾರಾಷ್ಟ್ರದಲ್ಲಿ ಕೊರೋನಾನ ಎರಡನೇ ಬಾರಿ ಆತಂಕ ಉಂಟು ಮಾಡಿದ ಹಿನ್ನೆಲೆಯಲ್ಲಿ 1 ರಿಂದ 9 ಮತ್ತು 11 ನೇ ತರಗತಿಗೆ ಪರೀಕ್ಷೆ ಇಲ್ಲದೆ ಮುಂದಿನ ಶೈಕ್ಷಣಿಕ ವರ್ಷಕ್ಕೆ ಎಲ್ಲ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿದೆ.

10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಅದೇ ರೀತಿಯಲ್ಲಿ ರಾಜ್ಯದಲ್ಲಿಯೂ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡಬೇಕೆಂಬ ಕುರಿತು ಚರ್ಚೆ ನಡೆದಿದೆ. ಇಂದು 1 ರಿಂದ 9 ನೇ ತರಗತಿ ಮಕ್ಕಳಿಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡುವ ಕುರಿತು ಮಹತ್ವದ ತೀರ್ಮಾನ ಕೈಗೊಳ್ಳಲಾಗುವುದು.

ವಿಜಯಪುರದಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್ ಅವರು, ಪಿಯುಸಿ ಮತ್ತು ಎಸ್‌ಎಸ್‌ಎಲ್ಸಿ ಪರೀಕ್ಷೆ ನಡೆಸಲು ಸಿದ್ಧತೆ ಕೈಗೊಳ್ಳಲಾಗಿದೆ. 1 ರಿಂದ 9 ನೇ ತರಗತಿ ಮಕ್ಕಳಿಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಭೆ ನಡೆಸಲಾಗಿದ್ದು, ಶಿಕ್ಷಣ ತಜ್ಞರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಪೋಷಕರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಏಪ್ರಿಲ್ 8 ರಂದು 1 ರಿಂದ 9 ನೇ ತರಗತಿ ಮಕ್ಕಳಿಗೆ ಪರೀಕ್ಷೆ ವಿಚಾರವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ