ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಮುಷ್ಕರ ತೀವ್ರವಾಗಿದೆ. ಸರ್ಕಾರದ ಮನವಿ, ಬೆದರಿಕೆಗಳಿಗೆ ನೌಕರರು ಬಗ್ಗುತ್ತಿಲ್ಲ. ನಾಳೆ ತಟ್ಟೆ, ಲೋಟ ಬಡಿಯುವ ಮೂಲಕ ಬೆಳಗ್ಗೆ 11 ಗಂಟೆಗೆ ರಾಜ್ಯಾದ್ಯಂತ ಚಳವಳಿ ನಡೆಸಲಾಗುವುದು ಎಂದು ಸಾರಿಗೆ ಇಲಾಖೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.
ನಾಳೆ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ, ತಹಶಿಲ್ದಾರ್ ಕಚೇರಿ ಮುಂದೆ ಚಳವಳಿ ನಡೆಸುತ್ತೇವೆ, ಚಳವಳಿ ಯಶಸ್ವಿಯಾಗಲಿದೆ ಎಂಬ ನಂಬಿಕೆಯಿದೆ. ನಾಳೆ ಅಪರಾಹ್ನ 3 ಗಂಟೆಗೆ ಸಭೆ ನಡೆಯಲಿದ್ದು ಅದರಲ್ಲಿ ರಾಜ್ಯ ಮಟ್ಟದ ಸಾರಿಗೆ ಮುಖಂಡರು ಭಾಗಿಯಾಗಲಿದ್ದಾರೆ.ತಟ್ಟೆ, ಲೋಟ ಬಡಿಯುವ ಮೂಲಕ ವಿಭಿನ್ನ ರೀತಿಯಲ್ಲಿ ಚಳವಳಿ ನಡೆಸುತ್ತೇವೆ ಎಂದರು.
ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದು ಇಂದು 5ನೇ ದಿನಕ್ಕೆ ಕಾಲಿಟ್ಟಿದೆ.
Laxmi News 24×7