Breaking News

ಮಸ್ಕಿ ಬಿಜೆಪಿ ಅಭ್ಯರ್ಥಿಗೆ ಅಂಟಿಕೊಂಡ ಸೋಂಕು!

Spread the love

ರಾಯಚೂರು : ರಾಜ್ಯದ ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಸದ್ಯ ಉಪ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಅವರಿಗೆ ಸೋಂಕು ಇರುವುದು ಖಚಿತವಾಗಿದೆ. ಈ ಕುರಿತು ಸ್ವತಃ ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಅವರು ಕೆಲವು ದಿನಗಳ ಹಿಂದೆಯಷ್ಟೇ ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದರು. ಆದರೂ ಅವರಿಗೆ ಸೋಂಕು ಮೆತ್ತಿಕೊಂಡಿದೆ.

ನನಗೆ ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಪ್ರತ್ಯೇಕವಾಗಿ ಇದ್ದೇನೆ. ಆದರೆ, ಯಾರೂ ಆತಂಕ ಪಡಬೇಕಾಗಿಲ್ಲ. ಶೀಘ್ರವೇ ಗುಣಮುಖನಾಗಿ ಬರುತ್ತೇನೆ. ಏ.17 ರಂದು‌ ಮತದಾನ ಇದ್ದು, ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ತಮ್ಮನ್ನು ಭೇಟಿ ಮಾಡುತ್ತಾರೆ. ಅವರನ್ನು ನಾನೇ ಎಂದು ಪರಿಭಾವಿಸಿ ಆಶೀರ್ವದಿಸಿ ಎಂದು ಮನವಿ ಮಾಡಿದ್ದಾರೆ.

ಜನಸಾಮಾನ್ಯರು ಹಾಗೂ ಅವರ ಕುಟುಂಬದವರ ಆರೋಗ್ಯದ ಬಗ್ಗೆ ಎಚ್ಚರಿಕೆ ತೆಗೆದುಕೊಳ್ಳಲು ವಿನಂತಿಸಿದ್ದಾರೆ.


Spread the love

About Laxminews 24x7

Check Also

ತುಂಗಭದ್ರಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ದುರ್ಮರಣ

Spread the loveರಾಯಚೂರು: ತುಂಗಭದ್ರಾ ನದಿಗೆ  ಸ್ನಾನಕ್ಕೆ ತೆರಳಿದ್ದ ನಾಲ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ  ಕೊಸಗಿ ಮಂಡಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ