ಬೆಂಗಳೂರು : ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇಂದುಉ 7 ನೇ ದಿನಕ್ಕೆ ಕಾಲಿಟ್ಟಿದ್ದು, ಯುಗಾದಿ ಹಬ್ಬಕ್ಕೆ ಸಂಬಳವಿಲ್ಲದ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಇಂದು ರಾಜ್ಯಾದ್ಯಂತ ಭಿಕ್ಷೆ ಬೇಡುವ ಮೂಲಕ ವಿನೂತನ ಪ್ರತಿಭಟನೆಗೆ ಮುಂದಾಗಿದ್ದಾರೆ.
ಸಾರಿಗೆ ನೌಕರರು ತಟ್ಟೆ ಲೋಟ ಹಿಡಿದು ಕುಟುಂಬದ ಜೊತೆ ಭಿಕ್ಷಾಟನೆ ಮಾಡಲು ನಿರ್ಧರಿಸಿದ್ದು, ಯಾವುದೇ ಕಾರಣಕ್ಕು ಕರ್ತವ್ಯಕ್ಕೆ ಮರಳುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಈ ಕುರಿತು ಮಾತನಾಡಿರುವ ಕೋಡಿಹಳ್ಳಿ ಚಂದ್ರಶೇಖರ್, ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಸದಾಶಿವನಗರದಲ್ಲಿ ಭಿಕ್ಷೆ ಬೇಡುವ ಮೂಲಕ ವಿಭಿನ್ನ ಚಳವಳಿ ನಡೆಸಲಿದ್ದಾರೆ. ಸಾರಿಗೆ ನೌಕರರಿಗೆ ವೇತನ ಕೊಡದಿದ್ರೆ ಅದು ಕಾನೂನು ಬಾಹಿರ, ಈ ಸಂಬಂಧ ಸಾರಿಗೆ ನೌಕರರು ರಾಜ್ಯಾದ್ಯಂತ ಪೊಲೀಸ್ ಠಾಣೆಗಳಲ್ಲಿ ದೂರು ಕೊಡಲಿದ್ದಾರೆ ಎಂದು ತಿಳಿಸಿದ್ದಾರೆ.
Laxmi News 24×7