Breaking News

ಕೋವಿಡ್ ಪರಿಸ್ಥಿತಿ; ಸರ್ವಪಕ್ಷಗಳ ಸಭೆ ಕರೆದ ಯಡಿಯೂರಪ್ಪ

Spread the love

ಬೆಂಗಳೂರು, ಏಪ್ರಿಲ್ 13; “ಕೋವಿಡ್ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಲು ಏಪ್ರಿಲ್ 18ರಂದು ಸರ್ವಪಕ್ಷಗಳ ಸಭೆಯನ್ನು ಕರೆಯಲಾಗಿದೆ. ಸದ್ಯಕ್ಕೆ ಲಾಕ್ ಡೌನ್ ಪ್ರಶ್ನೆಯೇ ಇಲ್ಲ” ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದರು.

ಬಸವಕಲ್ಯಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಯಡಿಯೂರಪ್ಪ, “ಮೇ 2ರ ತನಕ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಿದೆ ಎಂದು ತಾಂತ್ರಿಕ ಸಲಹಾ ಸಮಿತಿ ಹೇಳಿದೆ” ಎಂದರು.

ತಾಂತ್ರಿಕ ಸಹಲಾ ಸಮಿತಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಲು ಸಲಹೆ ನೀಡಿದೆ ಎಂಬ ವರದಿಯನ್ನು ಮುಖ್ಯಮಂತ್ರಿಗಳು ತಳ್ಳಿ ಹಾಕಿದ್ದಾರೆ. “ನಾನೂ ಕೂಡ ಸಮಿತಿಯಲ್ಲಿದ್ದೇನೆ, ಯಾರೂ ಲಾಕ್ ಡೌನ್‌ಗೆ ಸಲಹೆ ನೀಡಿಲ್ಲ, ಸದ್ಯಕ್ಕೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ” ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

“ಕೋವಿಡ್ ಹರಡುವಿಕೆ ತಡೆಯಲು ಜನರು ಸಹಕಾರ ನೀಡಬೇಕು. ಕೋವಿಡ್ ಪರಿಸ್ಥಿತಿ ನಿಭಾಯಿಸುವ ಬಗ್ಗೆ ಸರ್ವಪಕ್ಷಗಳ ಸಭೆಯಲ್ಲಿ ಸಲಹೆ ಪಡೆದು ತೀರ್ಮಾನ ಮಾಡುತ್ತೇನೆ” ಎಂದು ಯಡಿಯೂರಪ್ಪ ತಿಳಿಸಿದರು.

ಸಭೆಗೆ ಬರುವುದು ಅವರಿಗೆ ಬಿಟ್ಟಿದ್ದು; ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, “ಸರ್ವಪಕ್ಷಗಳ ಸಭೆ ಕರೆಯಿರಿ ಎಂದು ಅವರೇ ಹೇಳಿದ್ದು, ಸಭೆಗೆ ಕರೆಯುತ್ತೇವೆ. ಬರುವುದು, ಬಿಡುವುದು ಅವರಿಗೆ ಬಿಟ್ಟಿದ್ದು” ಎಂದು ಹೇಳಿದರು.


Spread the love

About Laxminews 24x7

Check Also

ಗರ್ಭಿಣಿಯಾದಳೆಂದು ಪತ್ನಿಯನ್ನೇ ಕೊಲೆ ಮಾಡಿದ ಪತಿ!

Spread the loveಚಾಮರಾಜನಗರ : ಗರ್ಭಿಣಿಯೊಬ್ಬರನ್ನು ತಾಳಿ ಕಟ್ಟಿದ ಪತಿಯೇ ಕೊಲೆ ಮಾಡಿರುವ ಘಟನೆ ತಾಲೂಕಿನ ಡೊಳ್ಳಿಪುರದ ತೋಟದ ಮನೆಯಲ್ಲಿ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ