Breaking News

8,778 ಹೊಸ ಪ್ರಕರಣ, 67 ಸಾವು, ಬೆಂಗ್ಳೂರಲ್ಲಿ 5,500 ಕೇಸ್ ಪತ್ತೆ

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಓಟ ಮುಂದುವರಿದಿದ್ದು, ಇಂದು 8,778 ಜನರಿಗೆ ಕೊರೊನಾ ಸೋಂಕು ತಗುಲಿದೆ. 67 ಜನ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ 5,500 ಜನರಿಗೆ ಸೋಂಕು ತಗುಲಿದ್ದು, ಸಿಲಿಕಾನ್ ಸಿಟಿಯಲ್ಲಿ 55 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ಈ ಮೂಲಕ ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 78,617ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,83,647ಕ್ಕೆ ಹೆಚ್ಚಳವಾಗಿದೆ. ರಾಜ್ಯದಲ್ಲಿ ಇಂದು 6,079 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ವರೆಗೆ ಒಟ್ಟು 9,92,003 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಈ ವರೆಗೆ ಒಟ್ಟು 13,008 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 474 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 10,883 ಆಂಟಿಜನ್ ಟೆಸ್ಟ್, 1,11,016 ಆರ್ ಟಿಪಿಸಿಆರ್ ಸೇರಿದಂತೆ ಒಟ್ಟು 1,21,899 ಕೊರೊನಾ ಪರೀಕ್ಷೆ ಮಾಡಲಾಗಿದೆ. ಇಂದು ರಾಜ್ಯದಲ್ಲಿ ಒಟ್ಟು 9,195 ಮಂದಿಗೆ ಲಸಿಕೆ ನೀಡಲಾಗಿದೆ.

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 73, ಬಳ್ಳಾರಿ 168, ಬೆಳಗಾವಿ 42, ಬೆಂಗಳೂರು ಗ್ರಾಮಾಂತರ 163, ಬೆಂಗಳೂರು ನಗರ 5,500, ಬೀದರ್ 198, ಚಾಮರಾಜನಗರ 51, ಚಿಕ್ಕಬಳ್ಳಾಪುರ 114, ಚಿಕ್ಕಮಗಳೂರು 19, ಚಿತ್ರದುರ್ಗ 45, ದಕ್ಷಿಣ ಕನ್ನಡ 142, ದಾವಣಗೆರೆ 66, ಧಾರವಾಡ 132, ಗದಗ 30, ಹಾಸನ 150, ಹಾವೇರಿ 17, ಕಲಬುರಗಿ 290, ಕೊಡಗು 14, ಕೋಲಾರ 67, ಕೊಪ್ಪಳ 29, ಮಂಡ್ಯ 114, ಮೈಸೂರು 492, ರಾಯಚೂರು 80, ರಾಮನಗರ 37, ಶಿವಮೊಗ್ಗ 95, ತುಮಕೂರು 350, ಉಡುಪಿ 75, ಉತ್ತರ ಕನ್ನಡ 75, ವಿಜಯಪುರ 105 ಹಾಗೂ ಯಾದಗಿರಿಯಲ್ಲಿ 45 ಪ್ರಕರಣಗಳು ವರದಿಯಾಗಿವೆ.

ಬೆಂಗಳೂರು ನಗರ 172, ಕಲಬುರಗಿ 44, ಕೋಲಾರ 39, ಮೈಸೂರು 31, ಧಾರವಾಡ 21, ಬೀದರ್ 21 ಹಾಗೂ ತುಮಕೂರಿನಲ್ಲಿ 20 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ