Breaking News

ಸಿಎಂ ಯಡಿಯೂರಪ್ಪರಿಗೆ ಸುಸ್ತು, ಜ್ವರ: ವಿಶ್ರಾಂತಿ ಬಳಿಕ ಚುನಾವಣೆ ಪ್ರಚಾರ

Spread the love

ಬೆಳಗಾವಿ: ಏಪ್ರಿಲ್ 17 ರಂದು ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಆಗಮಿಸಿದ ಸಿಎಂ ಯಡಿಯೂರಪ್ಪ ಬೆಳಗಾವಿಯ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ.

ಅವರಿಗೆ ಜ್ವರ ಮತ್ತು ಸುಸ್ತು ಆಗಿದ್ದು ರಾತ್ರಿ ಕೆಎಲ್‌ಇ ಆಸ್ಪತ್ರೆಯ ಇಬ್ಬರು ವೈದ್ಯರು ಆರೋಗ್ಯ ತಪಾಸಣೆ ಮಾಡಿದ್ದಾರೆ. ಆರೋಗ್ಯ ತಪಾಸಣೆ ಬಳಿಕ ಸಿಎಂಗೆ ಮಾತ್ರೆ ನೀಡಿದ್ದು ಸಿಎಂ ತಮ್ಮ ಕೊಠಡಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇಂದು ಅವರ ಆರೋಗ್ಯ ತಪಾಸಣೆಗೆ ಬಿಮ್ಸ್ ವೈದ್ಯರು ಕೂಡ ಆಗಮಿಸಿದ್ದಾರೆ.

ನಿನ್ನೆ ಜ್ವರ ಇದ್ದರೂ ಸಿಎಂ ಯಡಿಯೂರಪ್ಪ ಗೋಕಾಕ್ ಮತ್ತು ಮೂಡಲಗಿಯಲ್ಲಿ ಪ್ರಚಾರ ನಡೆಸಿದ್ದರು. ಇವತ್ತು ವಿಶ್ರಾಂತಿ ಬಳಿಕ ಬೆಳಗಾವಿಯಲ್ಲಿ ಪ್ರಚಾರ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ