Breaking News

ನಮ್ಮಪ್ಪ ಗಡಿಬಿಡಿಯಲ್ಲಿ ತಿಂಡಿ ತಿನ್ನದೆ ಕೆಲ್ಸಕ್ಕೆ ಹೋಗ್ತಿದ್ರು: ಸಾರಿಗೆ ನೌಕರರಿಗೆ ಧೈರ್ಯ ತುಂಬಿದ ಯಶ್‌

Spread the love

ಬೆಂಗಳೂರು: ಸಾರಿಗೆ ನೌಕರರು ತಮಗೆ ಬರೆದಿದ್ದ ಪತ್ರಕ್ಕೆ ನಟ ಯಶ್‌ ಪತ್ರದ ಮೂಲಕವೇ ಪ್ರತಿಕ್ರಿಯಿಸಿ ತಾವು ಸಾರಿಗೆ ಸಚಿವ ಲಕ್ಷ್ಮಣ ಸವದಿಯವರೊಂದಿಗೆ ನೌಕರರ ಸಮಸ್ಯೆಗಳ ಬಗ್ಗೆ ಮಾತನಾಡಿರುವುದಾಗಿ ತಿಳಿಸಿದ್ದಾರೆ.

ನಾನು ನಿಮ್ಮ ಸಂಸ್ಥೆಯ ಪ್ರಾಮಾಣಿಕ ನೌಕರನ ಮಗ. ನಮ್ಮಪ್ಪ ಎಷ್ಟೋ ದಿನ ತಿಂಡಿ ತಿನ್ನದೆ ಗಡಿಬಿಡಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದ ದಿನಗಳು ಈಗಲೂ ನೆನಪಿವೆ. ನಿಮ್ಮ ಹೋರಾಟ, ಅಳಲು ನನ್ನನ್ನು ಬಹುವಾಗಿ ಕಾಡುತ್ತಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ದೊಡ್ಡ ಸಮಸ್ಯೆಯೊಂದರ ಪರಿಹಾರಕ್ಕೆ ಚಿಕ್ಕ ಪ್ರಯತ್ನವೆಂಬಂತೆ ನಾನು ಈ ಬಗ್ಗೆ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿಯವರೊಂದಿಗೆ ಮಾತನಾಡಿದ್ದೇನೆ. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ವೇತನ ತಾರತಮ್ಯ ಬಗೆಹರಿಸಲು ಕೇಳಿದಾಗ ಅವರು ನನ್ನ ಮಾತನ್ನು ತಪ್ಪದೆ ಈಡೇರಿಸುವುದಾಗಿ ಭರವಸೆ ನೀಡಿದರು. ವಿರಸ ಬಿಟ್ಟು ಸಾಮರಸ್ಯದೊಂದಿಗೆ ಮುನ್ನಡೆಯೋಣ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

 


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ