Breaking News

ಕಿರಣ ಸುಬ್ಬರಾವ್ ಇನ್ನಿಲ್ಲ ಅಲ್ಪಕಾಲದ ಅನಾರೋಗ್ಯದ ನಂತರ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು.

Spread the love

ಬೆಳಗಾವಿ – ಇಲ್ಲಿಯ ಸ್ಮಾರ್ಟ್ ಸಿಟಿ ಕಂಪನಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ಕಿರಣ ಸುಬ್ಬರಾವ್ ನಿಧನರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು.

ಅಲ್ಪಕಾಲದ ಅನಾರೋಗ್ಯದ ನಂತರ ಶುಕ್ರವಾರ ಬೆಳಗ್ಗೆ ಅವರು ಕೊನೆಯುಸಿರೆಳೆದರು.

ಮೂಲತಃ ಲೋಕೋಪಯೋಗಿ ಇಲಾಖೆಯ ಉದ್ಯೋಗಿಯಾಗಿರುವ ಕಿರಣ ಸುಬ್ಬರಾವ್, ನಿಯೋಜನೆಯ ಮೇರೆಗೆ ಸ್ಮಾರ್ಟ್ ಸಿಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇದಕ್ಕೂ ಮೊದಲು ಬೆಳಗಾವಿ ಮಹಾನಗರ ಪಾಲಿಕೆಯಲ್ಲೂ ಹಲವು ವರ್ಷಗಳ ಕಾಲ ಕೆಲಸ ನಿರ್ವಹಿಸಿದ್ದರು.

ತಾಯಿ, ಪತ್ನಿ, ಓರ್ವ ಪುತ್ರ, ಓರ್ವ ಸಹೋದರಿ ಹಾಗೂ ಅಪಾರ ಬಂಧುಗಳನ್ನು ಅವರು ಅಗಲಿದ್ದಾರೆ.

ಕಿರಣ ಸುಬ್ಬರಾವ್ ಅವರ ಅಂತ್ಯ ಸಂಸ್ಕಾರ ಶುಕ್ರವಾರ ಬೆಳಗ್ಗೆ 9 ಗಂಟೆಗೆ ಚಿದಂಬರ ನಗರ ಸ್ಮಶಾನ ಭೂಮಿಯಲ್ಲಿ ನಡೆಯಲಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ