Breaking News

ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಶಾಸಕ ಸದಾಶಿವರಾವ ಬಾಪುಸಾಹೇಬ ಭೋಸಲೆ ನಿಧನ

Spread the love

ಬೆಳಗಾವಿ: ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಶಾಸಕ ಹಾಗೂ ಅಪ್ಪಟ ಗಾಂಧಿವಾದಿಯಾಗಿದ್ದ ಸದಾಶಿವರಾವ ಬಾಪುಸಾಹೇಬ ಭೋಸಲೆ(101) ಅವರು ವಯೋಸಹಜ ಅನಾರೋಗ್ಯದಿಂದ ತಾಲ್ಲೂಕಿನ ಕಡೋಲಿ ಗ್ರಾಮದ ಸ್ವಗೃಹದಲ್ಲಿ ಗುರುವಾರ ಮುಂಜಾನೆ ನಿಧನರಾದರು.

ಮೃತರಿಗೆ ಪುತ್ರ, ಸೊಸೆ, ಮಗಳು, ಅಳಿಯ ಹಾಗೂ ಮೊಮ್ಮಕ್ಕಳು ಇದ್ದಾರೆ.

ಸದಾಶಿವರಾವ ಬಾಪುಸಾಹೇಬ ಭೋಸಲೆ ಅವರು ಗಾಂಧೀಜಿ ಹಾಗೂ ವಿನೋಬಾ ಭಾವೆ ಅವರ ವಿಚಾರಧಾರೆಗಳನ್ನು ಪಾಲಿಸುತ್ತಿದ್ದರು. ಅವರಿಂದ ಪ್ರಭಾವಿತರಾಗಿ ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿದ್ದರು.

1946ರಲ್ಲಿ ಬ್ರಿಟಿಷ್ ಸರ್ಕಾರವು ನಡೆಸಿದ ಚುನಾವಣೆಯಲ್ಲಿ ಬೆಳಗಾವಿ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಿದ್ದರು ಹಾಗೂ 1952ರಲ್ಲಿ ಹಿರೇಬಾಗೇವಾಡಿ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದರು.

ಬೆಳಗಾವಿ ಉಪ ವಿಭಾಗಾಧಿಕಾರಿ ಅಶೋಕ ತೇಲಿ ಅವರು ಕಡೋಲಿಗೆ ತೆರಳಿ ಸದಾಶಿವರಾವ ಬಾಪುಸಾಹೇಬ ಭೋಸಲೆ ಅವರಿಗೆ ಜಿಲ್ಲಾಡಳಿತದ ಪರವಾಗಿ ಅಂತಿಮ ನಮನ ಸಲ್ಲಿಸಿದರು. ಇದೇ ವೇಳೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ